More

    ಬಿಜೆಪಿಗೆ ಮತ ನೀಡಿ, ಅಭಿವೃದ್ಧಿಗೆ ಸಹಕರಿಸಿ

    ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಅಬ್ಬರದ ಪ್ರಚಾರ ನಡೆಸಿದರು. ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಹಾಪುರ ಸೇರಿ ಸುತ್ತಲಿನ ಪ್ರದೇಶದಲ್ಲಿ ಪಾದಯಾತ್ರೆ ಮೂಲಕ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.

    ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಹೀಗಾಗಿ ಬೆಳಗಾವಿ ನಗರಕ್ಕೆ ಸಾಕಷ್ಟು ಅನುದಾನ ತರಲಾಗುತ್ತಿದೆ. ಈಗಾಗಲೇ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ರಸ್ತೆ, ಚರಂಡಿ, ಬಸ್ ನಿಲ್ದಾಣ, ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ದಿನದ 24 ಗಂಟೆ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ. ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿ ಕೆಲಸ ಆರಂಭವಾಗಲಿವೆ ಎಂದು ಭರವಸೆ ನೀಡಿದರು.

    ಬಿಜೆಪಿಗೆ ಅಧಿಕಾರ ಖಚಿತ: ಹಲವು ದಶಕಗಳಿಂದ ಬೆಳಗಾವಿ ಮಹಾನಗರ ಪಾಲಿಕೆಯು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವಶದಲ್ಲಿತ್ತು. ಈ ಬಾರಿ ಮಹಾನಗರ ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿಯಲಿದೆ. ವಾರ್ಡ್‌ಗಳಲ್ಲಿ ಅಭಿವೃದ್ಧಿ
    ಕೆಲಸಗಳಿಗಾಗಿ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಬೆಂಬಲಿಸಬೇಕು ಎಂದು ಅರಣ್ಯ ಮತ್ತು ಆಹಾರ ಪೂರೈಕೆ ಸಚಿವ ಉಮೇಶ ಕತ್ತಿ ವಿನಂತಿಸಿದರು.

    ಕಾಂಗ್ರೆಸ್‌ನಿಂದ ಸುಳ್ಳು ಭರವಸೆ: ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ. 50 ತೆರಿಗೆ ಮನ್ನಾ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಆದರೆ, 70 ವರ್ಷ ನಿರಂತರ ಆಡಳಿತ ನಡೆಸಿದ ಕಾಂಗ್ರೆಸ್‌ಗೆ ಹಲವು ಚುನಾವಣೆಗಳಲ್ಲಿ ಜನರೇ ತಕ್ಕ ಪಾಠ
    ಕಲಿಸಿದ್ದಾರೆ. ಈಗ ಪಾಲಿಕೆ ಚುನಾವಣೆಯಲ್ಲೂ ಸುಳ್ಳು ಭರವಸೆ ನೀಡುತ್ತಿದ್ದಾರೆ.

    ಇಲ್ಲಿಯೂ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಸಚಿವ ಉಮೇಶ ಕತ್ತಿ ಟಾಂಗ್ ನೀಡಿದರು. ಹೇಳಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಇತರರಿದ್ದರು.

    ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋಗಿದ್ದೆ. ಹಾಗಾಗಿ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಇನ್ನೆರಡು ದಿನಗಳ ಕಾಲ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತೇನೆ.
    | ಉಮೇಶ ಕತ್ತಿ ಅರಣ್ಯ, ಆಹಾರ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts