More

    ಬಿಜೆಪಿಗೆ ವಿಜಯೇಂದ್ರ ಸಾರಥ್ಯ, ದಾವಣಗೆರೆಯಲ್ಲಿ ಕಾರ್ಯಕರ್ತರ ವಿಜಯೋತ್ಸವ

    ದಾವಣಗೆರೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮ ಹಿನ್ನಲೆಯಲ್ಲಿ ನಗರದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
    ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು, ನಂತರ ಪಕ್ಷದ ನಾಯಕರಿಗೆ ಜಯಕಾರ ಕೂಗುವ ಮೂಲಕ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.
    ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ಬಿ.ವೈ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವುದು ರಾಜ್ಯದ ಯುವಜನತೆಗೆ ಸ್ಫೂರ್ತಿ ಹಾಗೂ ಶಕ್ತಿ ತಂದಿದೆ. ಪಕ್ಷ ಸಂಘಟನೆ ಕುರಿತಂತೆ ಅವರ ವಿಚಾರಧಾರೆಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಲಾಗುವುದು ಎಂದು ಹೇಳಿದರು.
    ವಿಜಯೇಂದ್ರರ ನೇತೃತ್ವದಲ್ಲಿ ದಾವಣಗೆರೆ ಸೇರಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಅವರಿಗೆ ಹೆಚ್ಚಿನ ಶಕ್ತಿ ನೀಡಲೆಂದು ಗಣಪತಿಯನ್ನು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
    ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಮಾತನಾಡಿ, ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದು ಹೊಸ ಹುಮ್ಮಸ್ಸು ತಂದಿದೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವ ಸಾಮರ್ಥ್ಯ ಅವರಲ್ಲಿದ್ದು, ಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಅಧಿಕ ಸ್ಥಾನಗಳಲ್ಲಿ ಪಕ್ಷವು ಜಯ ಗಳಿಸಲಿದೆ ಎಂದರು.
    ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಮಾತನಾಡಿ, ವಿಜಯೇಂದ್ರ ಅವರ ನೇಮಕ ಯುವಜನರ ಉತ್ಸಾಹ ಇಮ್ಮಡಿಗೊಳಿಸಿದೆ. ಅವರ ನಾಯಕತ್ವದಲ್ಲಿ ಭಾರತೀಯ ಜನತಾ ಪಕ್ಷವು ಮತ್ತಷ್ಟು ಸದೃಢಗೊಳ್ಳಲಿದೆ ಎಂದು ತಿಳಿಸಿದರು.
    ಮಹಾನಗರ ಪಾಲಿಕೆ ಸದಸ್ಯ ಶಾಂತಕುಮಾರ್ ಸೋಗಿ, ರಮೇಶ್‌ನಾಯ್ಕ, ಎ.ಎಸ್. ಮೃತ್ಯುಂಜಯ, ಟಿಂಕರ್ ಮಂಜಣ್ಣ, ಜಯಪ್ರಕಾಶ್ ಮಾಗಿ, ಶಿವನಗೌಡ ಪಾಟೀಲ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts