More

    ಬಿಜೆಪಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ

    ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿಗೆ ಇಲ್ಲಿಯವರೆಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ರಾಷ್ಟ್ರೀಯ ಪಕ್ಷವೊಂದಕ್ಕೆ ಈ ರೀತಿಯ ದುಸ್ಥಿತಿ ಬರಬಾರದಿತ್ತು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಲೇವಡಿ ಮಾಡಿದರು.

    ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾವೇ ಸೋತಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಈ ಸ್ಥಿತಿಗೆ ತರಲು ಕಾರಣರಾದವರು ಈಗ ನಾಪತ್ತೆಯಾಗಿದ್ದಾರೆ. ಬಿಜೆಪಿಯಲ್ಲಿ ಪಕ್ಷ ಕಟ್ಟುವವರು ಯಾರಿದ್ದಾರೆ? ಇನ್ನು ನನ್ನ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂದು ಹೇಳಿದರು.

    ನಾನು ಯಾವುದೇ ಷರತ್ತು ವಿಧಿಸಿ ಕಾಂಗ್ರೆಸ್ ಸೇರಿರಲಿಲ್ಲ. ಕೆಲವರು ನನಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದರು. ಬೇರೆ ಬೇರೆ ಬೇರೆ ಕಾರಣದಿಂದ ನನಗೆ ಸಚಿವ ಸ್ಥಾನ ನೀಡಿಲ್ಲ ಎಂಬುದು ನನಗೆ ಗೊತ್ತಿದೆ. ಇನ್ನು ಸಾಕಷ್ಟು ಅವಕಾಶಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಪೂರ್ಣ ಸಂಪುಟ ರಚನೆ ಬಳಿಕ ಕುಳಿತು ರ್ಚಚಿಸುವ ಬಗ್ಗೆ ಮಾತಾಗಿದೆ ಎಂದರು.

    ಲೋಕಸಭೆ ಚುನಾವಣೆಗೆ ಒಂದು ವರ್ಷ ಇದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಈಗಲೇ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಬೇಕಿತ್ತು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿ ಸುವರ್ಣ ಸೌಧ ಉದ್ಘಾಟನೆಗೆ ರಾಷ್ಟ್ರಪತಿ ಪ್ರಣವ ಮುಖರ್ಜಿ ಅವರನ್ನು ಆಹ್ನಾನಿಸಿದ್ದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts