More

    ಬಿಜೆಪಿಗೆ ಸಮಾನತೆ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ

    ಬಾಳೆಹೊನ್ನೂರು: ಡಾ. ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದ ಬಗ್ಗೆ ಹಾಗೂ ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯದ ಬಗ್ಗೆ ಬಿಜೆಪಿಗೆ ನಂಬಿಕೆ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದರು. ಸಿದ್ದರಾಮಯ್ಯ 75ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದರಿಂದ ಶಾಸಕ ಟಿ.ಡಿ.ರಾಜೇಗೌಡ ಅವರ ನಿವಾಸದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡಿದ್ದು, ಎಲ್ಲರಿಗೂ ಒಂದು ಮತ, ಒಂದು ಮೌಲ್ಯ ಎಂದು ಹೇಳಿದ್ದಾರೆ. ರಾಜಕೀಯದಲ್ಲಿ ಒಂದು ವ್ಯಕ್ತಿ, ಒಂದು ಮೌಲ್ಯ ಎಂಬುದು ಬಂದಿಲ್ಲ. ಇದು ಜಾರಿಯಾಗಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಆಗ ಮಾತ್ರ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ನೆಲೆಸಲು ಸಾಧ್ಯವಿದೆ ಎಂದು ಹೇಳಿದರು.

    ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ರಾಜ್ಯದ ವಿವಿಧ ಕ್ಷೇತ್ರಕ್ಕೆ ಉಸ್ತುವಾರಿ ಸಚಿವರು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಹಾನಿ ವೀಕ್ಷಣೆಗೆ ಬಂದಾಗ ಕಾಂಗ್ರೆಸ್ ಕಾನೂನು ಬಾಹಿರ ಚಟುವಟಿಕೆ ಮಾಡಿಲ್ಲ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹಾನಿ ವೀಕ್ಷಣೆಗೆ ಬಂದಾಗ ಕೊಡಗಿನಲ್ಲಿ ಕಿಡಿಗೇಡಿ ಕೃತ್ಯ ಮಾಡಿಸಿದೆ. ರಾಜ್ಯದ ಅಭಿವೃದ್ಧಿ ಶ್ರಮಿಸಿದ ನಾಯಕರನ್ನು ಸರ್ಕಾರ ಈ ರೀತಿ ನಡೆಸಿಕೊಂಡಿದ್ದು ಸರಿಯಲ್ಲ. ಕಾಂಗ್ರೆಸ್​ನವರು ಕಾನೂನು ರಕ್ಷಕರೇ ಹೊರತು ಭಕ್ಷಕರಲ್ಲ. ನಾವು ಗಾಂಧಿ ಆರಾಧಕರು. ಗೋಡ್ಸೆ ಆರಾಧಕರಲ್ಲ ಎಂದರು.

    ಆರ್​ಎಸ್​ಎಸ್, ಸಂಘ ಪರಿವಾರದವರಿಗೆ ಒಬ್ಬ ನಾಯಕ, ಒಂದು ಚಿಹ್ನೆ, ಒಂದು ಐಡಿಯಾಲಾಜಿಯಲ್ಲಿ ಮಾತ್ರ ನಂಬಿಕೆಯಿದೆ. ಸಾವರ್ಕರ್ ಜೈಲಿಗೆ ಹೋಗಿದ್ದು ನಿಜ. ಅವರು ಜೈಲಿನಲ್ಲಿ ಕ್ಷಮಾಪಣೆ ಪತ್ರ ಬರೆದುಕೊಟ್ಟು ಬಿಡುಗಡೆ ಆಗಿದ್ದರೇ ಹೊರತು ಪೂರ್ಣಾವಧಿ ಜೈಲು ಶಿಕ್ಷೆ ಅನುಭವಿಸಿಲ್ಲ. ಮಹಾತ್ಮ ಗಾಂಧಿ, ಲೋಹಿಯಾ, ಲಾಲ್​ಬಹಾದುರ್ ಶಾಸ್ತ್ರಿ, ನೆಹರೂ ಶಿಕ್ಷೆ ಅನುಭವಿಸಿ ಜೈಲಿಂದ ಹೊರ ಬಂದಿದ್ದಾರೆ. ನಾನು ಈ ಸತ್ಯವನ್ನು ಹೇಳುತ್ತೇನೆ. ಇದಕ್ಕಾಗಿಯೇ ಬಿಜೆಪಿಯವರಿಗೆ ನನ್ನ ಮೇಲೆ ಕೋಪ. ನನಗೆ ಸಾವರ್ಕರ್ ಬಗ್ಗೆ ಕೋಪ ಇಲ್ಲ. ಆದರೆ ಅವರು ಹೋರಾಟದಲ್ಲಿ ನಡೆದುಕೊಂಡ ರೀತಿ ಸರಿಯಿಲ್ಲ. ಮಹಾತ್ಮ ಗಾಂಧಿಯನ್ನು ಕೊಂದ ಬಿಜೆಪಿಯವರು ನನ್ನನ್ನು ಬಿಡುತ್ತಾರಾ? ಸಾವರ್ಕರ್, ಗೊಳವಲ್ಕರ್ ಅವರು ನಮ್ಮ ದೇಶದ ತ್ರಿವರ್ಣ ಧ್ವಜ ರಾಷ್ಟ್ರ ಧ್ವಜವಾಗಲು ಯೋಗ್ಯವಲ್ಲ ಎಂದು ಹೇಳಿದ್ದರು. ಇದನ್ನು ಹೇಳಿದರೆ ಬಿಜೆಪಿಯವರಿಗೆ ಆಗಲ್ಲ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts