More

    ಬಿಜೆಪಿಯಲ್ಲಿದೆ ಎಲ್ಲರಿಗೂ ಅವಕಾಶ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಲಕ್ಷ್ಮಣ್ ಅಭಿಮತ

    ದೇವನಹಳ್ಳಿ: ಹಿಂದುಳಿದ ವರ್ಗಗಳಿಗೆ ಹೆಚ್ಚು ಮೀಸಲಾತಿ ನೀಡಿದ ಏಕೈಕ ಪಕ್ಷ ಬಿಜೆಪಿ ಎಂದು ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಬಿಜೆಪಿ ಅಧ್ಯಕ್ಷ ಕೆ.ಲಕ್ಷ್ಮಣ್ ತಿಳಿಸಿದರು.

    ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಅಭಿಯಾನದಲ್ಲಿ ಮಾತನಾಡಿ, ಹಸಿರು ಕರ್ನಾಟಕ ಯೋಜನೆಯಡಿ ರಾಜ್ಯದಲ್ಲಿ ಹಮ್ಮಿಕೊಂಡಿರುವ 5 ಲಕ್ಷ ಸಸಿ ನೆಡುವ ಅಭಿಯಾನದ ಭಾಗವಾಗಿ ನಂದಿ ಗಿರಿಧಾಮದ ಸುತ್ತ ಸೀಡ್‌ಬಾಲ್ ಎಸೆಯುವ ಹಾಗೂ ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಭೇಟಿ ನೀಡಿದ್ದು, ಜತೆಗೆ ಒಬಿಸಿ ಮೋರ್ಚಾಗಳ ಬಲವರ್ಧನೆಗೆ ಹಲವು ತಾಲೂಕುಗಳಿಗೂ ಭೇಟಿ ನೀಡಿ, ಕಾರ್ಯಕರ್ತರ ಸಭೆ ನಡೆಸಲಾಗುತ್ತಿದೆ ಎಂದರು.

    ದೇಶಾದ್ಯಂತ ಶೇ.50 ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಮೀಸಲಾತಿ ನೀಡಿದ್ದು, ಅವರ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಯೋಜನೆ ರೂಪಿಸಿದೆ. ಡಾ. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತದ ಮೇರೆಗೆ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಮೀಸಲಾತಿ ಅವಶ್ಯಕವಾಗಿದ್ದು, ಅದನ್ನು ಬಿಜೆಪಿ ಅನುಷ್ಠಾನಗೊಳಿಸುವಲ್ಲಿ ಸಫಲವಾಗಿದೆ ಎಂದರು.

    60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡಲು ವಿಫಲವಾಗಿದ್ದು, ಮೋದಿ ಪ್ರಧಾನಿಯಾದ ಮೇಲೆ ಎಲ್ಲ ವರ್ಗದವರಿಗೂ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದರು.

    ರಾಜ್ಯ ಹಿಂದುಳಿದ ವರ್ಗಗಳ ಬಿಜೆಪಿ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮಾತನಾಡಿ, ರಾಜ್ಯಾದ್ಯಂತ 310 ಮಂಡಲಗಳಿದ್ದು, ಉತ್ತಮ ರೀತಿ ಸಂಘಟಿಸಬೇಕು. ಮುಂಬರುವ ಚುನಾವಣೆಯ ವೇಳೆಗೆ ಈ ಭಾಗದಲ್ಲಿ ಪಕ್ಷ ಶಕ್ತಿಯುತವಾಗಿ ಬೆಳೆಯಲು ಸಂಘಟನೆ ಮುಖ್ಯ ಎಂದರು.

    ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಬೂದಿಗೆರೆ ನಾರಾಯಣಸ್ವಾಮಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ. ರವಿಕುಮಾರ್, ಜಿಲ್ಲಾ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಗಣೇಶ್‌ಬಾಬು, ತಾಲೂಕು ಅಧ್ಯಕ್ಷ ಸುಂದರೇಶ್, ಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್, ಒಬಿಸಿ ತಾಲೂಕು ಅಧ್ಯಕ್ಷ ಆವತಿ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ್, ರಾಜ್ಯ ಪರಿಷತ್ ಸದಸ್ಯ ದೇ.ಸೂ ನಾಗರಾಜ್, ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ನಾಗವೇಣಿ, ಜಿಲ್ಲಾ ಕೋಶಾಧ್ಯಕ್ಷೆ ಸಾರಿಕಾ ಮಧುಸೂದನ್, ತಾಲೂಕು ಉಪಾಧ್ಯಕ್ಷೆ ಆರ್.ಪುನೀತಾ, ಮಾಧ್ಯಮ ಪ್ರಮು ಎಸ್. ರಮೇಶಕುಮಾರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts