ಬಿಜೆಪಿಯಿಂದ ಮತದಾರ ಚೇತನ ಮಹಾಭಿಯಾನ ಶಾಸಕ ಹೆಚ್.ಕೆ.ಸುರೇಶ್

ಬಿಜೆಪಿಯಿಂದ ಮತದಾರ ಚೇತನ ಮಹಾಭಿಯಾನ ಶಾಸಕ ಹೆಚ್.ಕೆ.ಸುರೇಶ್
Published on

ಹಾಸನ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಮತದಾರ ಚೇತನ ಮಹಾಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಹೆಚ್.ಕೆ.ಸುರೇಶ್ ತಿಳಿಸಿದರು.

ಈ ಅಭಿಯಾನ ಕಾರ್ಯಕ್ಕಾಗಿ ಆ.25 ರಂದು ಪ್ರತಿ ಜಿಲ್ಲೆಯಲ್ಲಿ 3 ಸದಸ್ಯರ ಜಿಲ್ಲಾ ಸಮಿತಿ ಮತ್ತು ವಿಧಾನಸಭೆ ಕ್ಷೇತ್ರಕ್ಕೆ 3 ಜನರ ಸಮಿತಿ ಮತ್ತು ಶಕ್ತಿ ಕೇಂದ್ರ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಆ.28ರಂದು ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಾಗಾರ ನಡೆಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಲೋಕಸಭಾ ಚುನಾವಣೆಗೆ ಪಕ್ಷವನ್ನ ಸಂಘಟಿಸುವ ದೃಷ್ಟಿಯಿಂದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ಆರಂಭಿಸುವುದು ಹಾಗು ಹೊಸ ಮತದಾರರ ನೋಂದಣಿಗೆ ಬೂತ್ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನನ್ನ ದೇಶ- ನನ್ನ ಮತ ಘೋಷವಾಕ್ಯದೊಂದಿಗೆ ಈ ಅಭಿಯಾನ ಪ್ರಾರಂಭವಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿ ದೇಶವನ್ನು ಮತ್ತೆ ಮುನ್ನಡೆಸುವ ಸಂಪೂರ್ಣ ನಂಬಿಕೆಯಿದೆ. ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಬೇಕಿದ್ದರೆ ಪ್ರತಿಯೊಬ್ಬ ಪ್ರಜೆಯೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅಭಿಯಾನ ಪ್ರಾರಂಭಿಸುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ವಿಶ್ವದ ಅತಿದೊಡ್ಡ ಸೈದ್ಧಾಂತಿಕ ಮತ್ತು ಕಾರ್ಯಕರ್ತ ಆಧಾರಿತ ಸಂಘಟನೆಯಾಗಿದ್ದು, ದೇಶದ ಉದ್ದಗಲಕ್ಕೂ ತನ್ನ ಕಾರ್ಯವ್ಯಾಪ್ತಿ ಹೊಂದಿದೆ. ಬಿಜೆಪಿ, ಸರ್ವವ್ಯಾಪಿ ಸರ್ವಸ್ಪರ್ಶಿಯಾಗಿದೆ .ಪಕ್ಷದ ಲಕ್ಷಾಂತರ ಕಾರ್ಯಕರ್ತರು ಸಂಘಟನೆಯ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಕ್ರಿಯರಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಜೆ.ಪಿ.ನಡ್ಡಾಜಿ ಅವರ ನಿರ್ದೇಶನದಂತೆ ಹೊಸ ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಖಂಡರಾದ ಜಿ.ಜಿ.ಲೋಕೇಶ್, ಹೆಚ್.ಎಂ. ಸುರೇಶ್ ಕುಮಾರ್, ಪ್ರವೀಣ್, ಮನೋಜ್ ಕುಮಾರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net