More

    ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ಮತ್ತಷ್ಟು ವೇಗ: ಕೃಷ್ಣರಾಜ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ

    ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜನರಿಗೆ ಸಾಕಷ್ಟು ಅನುಕೂಲಗಳು ಆಗಲಿದ್ದು, ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ಹೇಳಿದರು.

    ಕುವೆಂಪುನಗರದಲ್ಲಿ ಶನಿವಾರ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಾರ್ಯಕರ್ತರು ಪಣತೊಟ್ಟು ಮನೆಮನೆಗೆ ತೆರಳಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಾಮಾಣಿಕ ಕಾರ್ಯಕರ್ತರ ಪ್ರೀತಿಗೆ ಚಿರಋಣಿ. ಕೇಂದ್ರದಿ ಂದ ಬಿಡುಗಡೆ ಆಗುವ ಪ್ರತಿಯೊಂದು ಪೈಸೆ ಹಣವೂ ನಿರ್ದಿಷ್ಟ ಫಲಾನುಭವಿಯನ್ನು ತಲುಪಲು ಹಾಗೂ ನಿರ್ದಿಷ್ಟ ಯೋಜನೆಗೆ ಬಳಕೆ ಯಾಗಲು ಡಬಲ್ ಎಂಜಿನ್ ಸರ್ಕಾರ ಮುಖ್ಯ. ಇದು ಬಿಜೆಪಿ ಆಡಳಿತದಿಂದ ಸಾಬೀತಾಗಿದೆ ಎಂದರು.

    ಜನರಲ್ಲಿ ಭರವಸೆ ಮೂಡಿಸಿದ ಬಿಜೆಪಿ

    ಯೋಜನೆಗಳ ಪರಿಣಾಮಕಾರಿ ಜಾರಿಯಿಂದ ಜನಸಾಮಾನ್ಯ ಜನರ ಬದುಕಿನಲ್ಲಿ ಹೊಸ ಆಶಾವಾದ ಮೂಡಿದೆ. ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಗಳು ಉದ್ಯೋಗ ಸೇರಿದಂತೆ ಹಲವು ವಲಯಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪೂರಕ ಸಹಯೋಗದಲ್ಲಿ ಮಹತ್ವಾಕಾಂಕ್ಷಿ ಬೆಳವಣಿಗೆ ಕಾಣಬಹುದು ಎಂದರು.

    ಬಿಜೆಪಿಯ ಜನಕಲ್ಯಾಣ ಕಾರ್ಯಕ್ರಮಗಳೇ ಗೆಲುವಿಗೆ ಸ್ಪೂರ್ತಿಯಾಗಿದ್ದು, ಜನರ ಬದುಕು ಸುಧಾರಣೆಯತ್ತ ಸಾಗುತ್ತಿದೆ. ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು.

    ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವ ಬಿಜೆಪಿ

    ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನಗಳನ್ನು ಬಿಜೆಪಿ ನಿರಂತರವಾಗಿ ನೀಡುತ್ತಾ ಬಂದಿದೆ. ಸಾಮಾನ್ಯ ಕಾರ್ಯಕರ್ತನಾದ ನನಗೆ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಕ್ಷ ನೀಡಿದೆ. ಇಂತಹ ಬೆಳವಣಿಗೆಗಳನ್ನು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ. ಹೀಗಾಗಿ ಕಾರ್ಯಕರ್ತರು ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತಾರೆ. ಕಾರ್ಯಕರ್ತರ ಬಲದಿಂದಲೇ ಈ ಬಾರಿ ಗೆಲುವು ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಬಿಜೆಪಿ ಮುಖಂಡರಾಧ ಎಂ.ಸಿ. ರಮೇಶ್, ರಮೇಶ್, ವೆಂಕಟೇಶ್ ದಾಸ್, ರವಿ, ಛಾಯಮ್ಮ, ನಾಗಣ್ಣ, ಲೋಕೇಶ್, ಚೆಲುವ, ಮಂಜುನಾಥ್ ಹಾಗೂ ಇತರರು ಇದ್ದರು.

    ವಿವಿಧೆಡೆ ಪ್ರಚಾರ: ಕೃಷ್ಣರಾಜ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ವಿವೇಕಾನಂದನಗರ, ನಿಮಿಷಾಂಬ ಬಡಾವಣೆಯಲ್ಲಿ ಮತಯಾಚಿಸಿದರು. ಮಾಜಿ ಮೇಯರ್ ಸುನಂದ ಪಾಲನೇತ್ರ, ಪಕ್ಷದ ಪ್ರಮುಖರಾದ ಸಂಪತ್, ಜಗದೀಶ್, ಮನೋಜ್, ರಾಜೇಶ್, ಪಚ್ಚು, ಜಗದೀಶ್, ಮಂಜುನಾಥ್, ರಕ್ಷಿತ್, ರೂಪಾ, ಜನಾರ್ದನ್, ಸಿಂಗ್ರಿ ಗೌಡ, ಮನು, ಶ್ರೇಯಸ್ ಹಾಗೂ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts