More

    ಬಿಜೆಪಿ ಅಧಿಕಾರದಲ್ಲಿ ಮಹಿಳಾ ಉದ್ಯೋಗ ಪ್ರಮಾಣ ಕುಸಿತ

    ಚಿತ್ತಾಪುರ (ಕಲಬುರಗಿ): ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಸಾಕಷ್ಟು ಶ್ರಮಿಸಿದೆ. ನಬಾರ್ಡ್​ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಹಾಗೂ ಪ್ರೋತ್ಸಾಹ ಧನ ಒದಗಿಸಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮಹಿಳೆಯರ ಉದ್ಯೋಗದ ಪ್ರಮಾಣ ಕುಸಿದಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ದೂರಿದರು.

    ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತಿಯಿಂದ 75ನೇ ಸ್ವಾತಂತೊ್ರೃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಉದ್ದಿಮೆಗಾಗಿ 1 ಲಕ್ಷ ರೂ. ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ತ್ರೀಯರ ಸಬಲೀಕರಣಕ್ಕಾಗಿ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಸ್ತ್ರೀ ಶಕ್ತಿ ಗುಂಪುಗಳನ್ನು ರಚನೆ ಮಾಡಿತ್ತು ಎಂದು ಹೇಳಿದರು.

    ಪ್ರತಿ ಸ್ವಸಹಾಯ ಸಂಘಕ್ಕೆ ತಲಾ 1 ಲಕ್ಷ ರೂ.ನಂತೆ ಒಟ್ಟು 59 ಸ್ವಸಹಾಯ ಸಂಘಗಳಿಗೆ ಒಟ್ಟು 59 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ್, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್ ಮಾತನಾಡಿದರು.

    ಜಿಪಂ ಮಾಜಿ ಅಧ್ಯಕ್ಷ ರಮೇಶ ಮರಗೋಳ, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಉಪಾಧ್ಯಕ್ಷೆ ಶ್ರುತಿ ಪೂಜಾರಿ, ಕೆಪಿಸಿಸಿ ಸದಸ್ಯರಾದ ನಾಗರೆಡ್ಡಿ ಪಾಟೀಲ್ ಕರದಾಳ, ಅಜೀಜ್ ಸೇಠ್, ಪ್ರಮುಖರಾದ ಶ್ರೀನಿವಾಸ ಸಗರ, ಈರಪ್ಪ ಬೋವಿ, ಶಿವಕಾಂತ ಬೆಣ್ಣೂರಕರ್, ಶಿವಾಜಿ ಕಾಶಿ, ಜಗದೀಶ ಚವ್ಹಾಣ್, ಬಸವರಾಜ ಚಿನ್ನಮಳ್ಳಿ, ಮಲ್ಲಿಕಾರ್ಜುನ ಮುಡಬೂಳಕರ್, ಶರಣು ಡೋಣಗಾಂವ್, ರಾಮಲಿಂಗ ಬಾನನ್ ಇತರರಿದ್ದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ರಾಜಕುಮಾರ ರಾಠೋಡ್ ಪ್ರಾಸ್ತಾವಿಕ ಮಾತನಾಡಿದರು. ಪಲ್ಲವಿ ಪ್ರಾರ್ಥನೆ ಗೀತೆ ಹಾಡಿದರು. ಕವಿತಾ ಪಾಟೀಲ್ ಸ್ವಾಗತಿಸಿದರು. ಸಂತೋಷಕುಮಾರ ಶಿರನಾಳ ನಿರೂಪಣೆ ಮಾಡಿದರು.

    ಮಹಿಳೆಯರಿಗಾಗಿ ಸಾಮೂಹಿಕ ಶೌಚಗೃಹ ನಿರ್ಮಾಣದ ಗುರಿ ಹೊಂದಲಾಗಿದೆ. ಕೆಕೆಆರ್​ಡಿಬಿ, ಶಾಸಕರ ನಿಧಿ, ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ಅನುದಾನದಲ್ಲಿ ಪಂಚಾಯತಿ ಮಟ್ಟದಲ್ಲಿ ಪ್ರಾಯೋಗಿಕವಾಗಿ ನೈರ್ಮಲ್ಯ ಯೋಜನೆಯಡಿಯಲ್ಲಿ ಶೌಚಗೃಹ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ಬಾರಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ, ಪ್ರತಿ ಗ್ರಾಮದಲ್ಲಿ ಈ ಯೋಜನೆಯಡಿಯಲ್ಲಿ ಶೌಚಗೃಹ ನಿರ್ಮಾಣ ಮಾಡಲಾಗುವುದು.
    | ಪ್ರಿಯಾಂಕ್ ಖರ್ಗೆ, ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts