More

    ಬಿಜೆಪಿ ಯಡಿಯೂರಪ್ಪ ಕುಟಂಬದ ಹಿಡಿತದಲ್ಲಿದೆಯೇ ? : ಈ ಬಗ್ಗೆ ಸಿ.ಎನ್. ಅಶ್ವಥ್ ನಾರಾಯಣ್ ಏನಂದರು?

    ಮೈಸೂರು: ರಾಜ್ಯದಲ್ಲಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿದೆ ಎಂಬ ಆರೋಪ ಸತ್ಯಕ್ಕೆ ದೂರವಾ ದದ್ದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದರು.

    ನಗರದ ಶ್ರೀ ಸುತ್ತೂರು ಮಠಕ್ಕೆ ಗುರುವಾರ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪಾರ್ಲಿಮೆಂಟರಿ ಬೋರ್ಡ್ ಸದಸ್ಯರಾಗಿದ್ದು, ಅವರು ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಹಾಗಾಂತ ಅವರ ಕುಟುಂಬದ ಹಿಡಿತದಲ್ಲಿ ಪಕ್ಷ ಇದೆ ಅನ್ನುವ ಮಾತಿಗೆ ಅರ್ಥವಿಲ್ಲ ಎಂದರು.

    ಸಿದ್ದರಾಮಯ್ಯ ನಾನು ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಂಡಿದ್ದಾರೆ. ಆದರೆ, ವಾಸ್ತವವಾಗಿ ಅವರು ವೀಕ್ ಸಿಎಂ ಹಾಗೂ ಅವರದ್ದು ವೀಕ್ ಪಾರ್ಟಿ. ರಾಜ್ಯದಲ್ಲಿ ಸಿದ್ದರಾಮಯ್ಯ ಸೌಂಡ್ ಇಲ್ಲ. ಅವರ ಆಡಳಿತದಲ್ಲಿ ಭ್ರಷ್ಟಾಚಾರ, ಲೂಟಿಯಷ್ಟೇ ನಡೆಯುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಸಿದ್ದರಾಮಯ್ಯಗೆ ಯಾರ ಮೇಲೂ ನಿಯಂತ್ರಣ ಇಲ್ಲ ಎಂದು ಟೀಕಿಸಿದರು.

    ಕಾಂಗ್ರೆಸ್ ಮುಳುಗುತ್ತಿರುವ ಪಕ್ಷವಾಗಿದ್ದು, ಆ ಪಕ್ಷಕ್ಕೆ ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳು ದೊರೆಯುತ್ತಿಲ್ಲ. ಹಾಗಾಗಿ ಬಿಜೆಪಿಯಲ್ಲಿ ತಿರಸ್ಕಾರಗೊಂಡವರು ಅಲ್ಲಿ ಪುರಸ್ಕಾರಗೊಳ್ಳುತ್ತಾರೆ. ಆದರೆ, ಕಾಂಗ್ರೆಸ್‌ನಲ್ಲಿ ತಿರಸ್ಕಾರಗೊಳ್ಳುವವರು ನಮ್ಮಲ್ಲಿ ಪುರಸ್ಕಾರ ಗೊಳ್ಳುವುದಿಲ್ಲ. ಏಕೆಂದರೆ ನಮ್ಮಲ್ಲಿ ಓವರ್ ಫ್ಲೋ ಇದೆ. ಹಾಗಾಗಿ ನಮ್ಮಿಂದ ಯಾರು ಬರುತ್ತಾರೆ ಎಂದು ಕಾಂಗ್ರೆಸ್ ಕಾಯುತ್ತಾ ಕುಳಿತ್ತಿದೆ ಎಂದರು.

    ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಕಣಕ್ಕೆ ಇಳಿಯುತ್ತಾರೆ. ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೈತ್ರಿಯ ಒಗ್ಗಟ್ಟಿನ ಕುರಿತು ಮಾತನಾಡಿದ್ದಾರೆ. ಎರಡು ಮೂರು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಇದೆ. ಟಿಕೆಟ್ ಸಿಗದಿದ್ದಾಗ ಬೇಸರಗೊಳ್ಳುವುದು ಸಹಜ. ಹಾಗಾಂತ ಯಾರು ದುಡುಕಿ ಪಕ್ಷವನ್ನು ತೊರೆಯಬಾರದು ಎಂದು ಮನವಿ ಮಾಡಿದರು.

    ಧಾರ್ಮಿಕ ದತ್ತಿ ವಿಧೇಯಕವನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವುದನ್ನು ಸ್ವಾಗತ ಮಾಡುತ್ತೇವೆ. ಆಯಾ ದೇವಸ್ಥಾನದ ಆದಾಯ ಅದೇ ದೇವಸ್ಥಾನಕ್ಕೆ ಬಳಕೆಯಾಗಬೇಕು. ಸರ್ಕಾರ ಉಳಿದ ದೇವಸ್ಥಾನಗಳಿಗೆ ಅನುದಾನ ನೀಡಲಿ ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts