More

    ಬಿಜೆಪಿ ವಿರುದ್ಧ ಕೈ ಪಡೆ ಆಕ್ರೋಶ

    ಬೀದರ್: ಕೇಂದ್ರದ ಬಿಜೆಪಿ ಸಕರ್ಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ಕೊಡುತ್ತಿದೆ ಎಂದು ದೂರಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

    ಮಾಜಿ ಸಚಿವ, ಪಕ್ಷದ ಜಿಲ್ಲಾ ಉಸ್ತುವಾರಿ ಡಾ.ಶರಣಪ್ರಕಾಶ ಪಾಟೀಲ್, ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

    ಶಾಸಕ ರಹೀಮ್ ಖಾನ್ ಮಾತನಾಡಿ, ದೇಶದ ಜನ ಸಂಕಷ್ಟದಲ್ಲಿದ್ದಾರೆ. ಎಲ್ಲ ಆಹಾರ ಧಾನ್ಯಗಳಿಗೆ ಜಿಎಸ್ಟಿ ಹೊರೆಯಾಗಿದೆ. ಇದರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗಿದೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ದೂರಿದರು. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿರುವ ಹಿನ್ನೆಲೆಯಲ್ಲಿ 50ಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು.

    ಮಾಜಿ ಸಂಸದ ನರಸಿಂಗರಾವ ಸೂರ್ಯವಂಶಿ, ಮಾಜಿ ಶಾಸಕ ಅಶೋಕ ಖೇಣಿ, ಮಾಜಿ ಎಂಎಲ್ಸಿ ವಿಜಯಸಿಂಗ್, ಕೆ. ಪುಂಡಲೀಕರಾವ, ಕೆಪಿಸಿಸಿ ಪ್ರಧಾನ ಕಾರ್ಯದಶರ್ಿಗಳಾದ ಮೀನಾಕ್ಷಿ ಸಂಗ್ರಾಮ, ಗೀತಾ ಚಿದ್ರಿ, ಪ್ರಮುಖರಾದ ಅಮೃತರಾವ ಚಿಮಕೋಡೆ, ಪಂಡಿತ ಚಿದ್ರಿ, ಅಬ್ದುಲ್ ಮನ್ನಾನ್ ಸೆಠ್, ದತ್ತು ಮೂಲಗೆ, ಬಾಬು ಹೊನ್ನಾನಾಯಕ, ಪವರ್ೆಜ್ ಕಮಾಲ್, ರೋಹಿದಾಸ ಘೋಡೆ, ಬಸಿರೊದ್ದೀನ್ ಹಾಲಹಿಪ್ಪಗರ್ಾ, ಎಂ.ಎ.ಸಮಿ, ಮಾರುತಿ ಶಾಕಾ, ಎಂ.ಡಿ. ಯುಸೂ್ ಇತರರಿದ್ದರು.

    ಕಾಂಗ್ರೆಸ್ನಿಂದ ಬಿಜೆಪಿಗೆ ಹೆದರಿಕೆಯಿದೆ. ಹೀಗಾಗಿ ಕಾಂಗ್ರೆಸ್ಮುಕ್ತ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು ಕೇಂದ್ರ ಸಕರ್ಾರ ಸಮಸ್ಯೆ ನೀಡುತ್ತಿದೆ. ಇಡಿ, ಸಿಐಡಿ ಸೇರಿದಂತೆ ತನಿಖಾ ಸಂಸ್ಥೆಗಳಿಂದ ಹೆದರುವ ಅವಶ್ಯಕತೆ ಇಲ್ಲ.

    | ವಿಜಯಸಿಂಗ್, ಮಾಜಿ ಎಂಎಲ್ಸಿ

    ದೇಶದಲ್ಲಿ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಪ್ರತಿಪಕ್ಷಗಳ ಹೋರಾಟ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ದೇಶದ ಕಾನೂನು ಪ್ರಬಲವಾಗಿದ್ದು, ನಮಗೆ ನ್ಯಾಯ ಸಿಗಲಿದೆ.
    | ಡಾ.ಶರಣಪ್ರಕಾಶ ಪಾಟೀಲ್, ಮಾಜಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts