More

    ಬಿತ್ತನೆ ಬೀಜ ವಿತರಣೆಗೆ ಆಗ್ರಹ

    ಗುಂಡ್ಲುಪೇಟೆ: ಕೃಷಿ ಇಲಾಖೆಯು ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ಪೂರೈಸದಿರುವುದನ್ನು ಖಂಡಿಸಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

    ಬಿತ್ತನೆ ಬೀಜ ವಿತರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸೋಮವಾರ ಸಾವಿರಾರು ರೈತರು ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿದ್ದರು. ಆದರೆ ಅಲ್ಲಿನ ಸಿಬ್ಬಂದಿ ಇನ್ನೂ ಬೀಜಗಳು ಬಂದಿಲ್ಲ ಎಂದು ಉತ್ತರಿಸಿದ್ದರಿಂದ ರೊಚ್ಚಿಗೆದ್ದ ರೈತರು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
    ಪೂರ್ವ ಮುಂಗಾರು ಮಳೆಗೆ ಬಹುತೇಕ ರೈತರು ಜೋಳ, ಹತ್ತಿ ಹಾಗೂ ಸೂರ್ಯಕಾಂತಿ ಮುಂತಾದ ಬಿತ್ತನೆ ಮಾಡುವುದು ವಾಡಿಕೆ. ಈ ಸಂದರ್ಭದಲ್ಲಿ ಕೃಷಿ ಇಲಾಖೆಯು ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುತ್ತಿತ್ತು. ಆದರೆ ಈ ಬಾರಿ ಕೃಷಿ ಇಲಾಖೆಯು ಸಕಾಲದಲ್ಲಿ ಬಿತ್ತನೆ ಬೀಜ ಕಂಪನಿಗಳ ಜತೆ ದರ ನಿಗದಿ ಒಪ್ಪಂದ ಮಾಡಿಕೊಂಡಿಲ್ಲ. ಮಳೆ ಆರಂಭವಾಗಿ ಇಪ್ಪತ್ತು ದಿನಗಳಾದರೂ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಆರಂಭಿಸಿಲ್ಲ. ಇದರಿಂದ ರೈತರು ಮಾರುಕಟ್ಟೆಯಲ್ಲಿ ಪೂರ್ಣ ಬೆಲೆ ತೆತ್ತು ಬಿತ್ತನೆ ಬೀಜ ಖರೀದಿಸುವಂತಾಗಿದ್ದು, ಈಗಾಗಲೇ ಉತ್ಪಾದನಾ ವೆಚ್ಚದ ಹೆಚ್ಚಳ ಹಾಗೂ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ದೊರಕದೆ ರೈತರು ನಷ್ಟಕ್ಕೊಳಗಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸ್ಥಳಕ್ಕೆ ಆಗಮಿಸಿದ ಪ್ರಭಾರ ಸಹಾಯಕ ಕೃಷಿ ನಿರ್ದೇಶಕಿ ಲೀಲಾವತಿ ಮಾತನಾಡಿ, ಚುನಾವಣಾ ಆಯೋಗದ ಅನುಮತಿ ಪಡೆದು ದರ ನಿಗದಿ ಮಾಡಲಾಗುತ್ತಿದ್ದು, ಮುಂದಿನ ಶುಕ್ರವಾರದ ವೇಳೆಗೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿಯೂ ವಿತರಣೆ ಮಾಡಲಾಗುವುದು ಎಂದು ಹೇಳಿದರು. ಬಳಿಕ ರೈತರು ಪ್ರತಿಭಟನೆ ವಾಪಸ್ ಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts