More

    ಬಿತ್ತನೆ ಬೀಜ ವಿತರಣೆಗೆ ಚಾಲನೆ

    ಧಾರವಾಡ: ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ ವತಿಯಿಂದ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ಕೆ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.

    ಕೃಷಿ ಇಲಾಖೆಯಿಂದ ವಿವಿಧ ಸವಲತ್ತುಗಳನ್ನು ಪಡೆದು ಉತ್ತಮ ಇಳುವರಿ ಪಡೆಯಬೇಕು. ಕೋವಿಡ್-19 ಸಂದರ್ಭದಲ್ಲಿ ರೈತರು ದೈಹಿಕ ಅಂತರ ಕಾಪಾಡಿಕೊಳ್ಳಬೇಕಲ್ಲದೆ, ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೃಷಿ ಚಟುವಟಿಕೆ ನಡೆಸಬೇಕು ಎಂದು ಶಾಸಕ ಅಮೃತ ದೇಸಾಯಿ ಮನವಿ ಮಾಡಿದರು.

    ಕೃಷಿ ಸಹಾಯಕ ನಿರ್ದೇಶಕ ಸಿ.ಜಿ. ಮೇತ್ರಿ ಮಾತನಾಡಿ, ಇಲಾಖೆಯಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಗರಿಷ್ಠ 2 ಹೆಕ್ಟೇರ್​ಗೆ ಬಿತ್ತನೆ ಬೀಜ ವಿತರಿಸಲಾಗುವುದು. ರೈತರು ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದರು. ತಾಪಂ ಅಧ್ಯಕ್ಷ ಈರಣ್ಣ ಏಣಗಿ, ಸದಸ್ಯರಾದ ಶಂಕ್ರಪ್ಪ ಬಿಜವಾಡ, ಸುರೇಂದ್ರ ದೇಸಾಯಿ, ಕೃಷಿಕ ಸಮಾಜದ ಅಧ್ಯಕ್ಷ ಬಸವರಾಜ ಕುಂದಗೋಳ, ತವನಪ್ಪ ಅಷ್ಟಗಿ, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಕೃಷಿ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts