More

    ಬಿದಿರು ಉತ್ಪಾದನೆಗೆ ಉತ್ತೇಜನ. ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ, ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ

    ಗೌರಿಬಿದನೂರು: ರಾಜ್ಯದಲ್ಲಿ ಬಿದುರು ಬೆಳೆ ಪ್ರದೇಶವನ್ನು ವಿಸ್ತರಿಸಲಾಗುವುದು. ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಬಿದಿರು ಉತ್ಪಾದನೆಗೆ ಉತ್ತೇಜನ ನೀಡಲಾಗುವುದು ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದರು.

    ಸಚಿವರಾದ ಬಳಿಕ ಮೊದಲ ಬಾರಿಗೆ ತಾಲೂಕಿಗೆ ಭೇಟಿ ನೀಡಿದ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅರಣ್ಯ ಪ್ರದೇಶ, ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

    ಉತ್ತರ ಪಿನಾಕಿನಿ ನದಿ ಪಾತ್ರದಲ್ಲಿ ಹಿರೇಬಿದನೂರು ಸಮೀಪ ಅರಣ್ಯ ಇಲಾಖೆಯಿಂದ ಬೆಳೆಸಿರುವ ಬಿದುರು ಮೆಳೆಯಲ್ಲಿ ಬಿದಿರು ತಳಿಗಳ ಮಾಹಿತಿ ಪಡೆದ ಸಚಿವರು, ತಾಲೂಕಿನಲ್ಲಿ ಅರಣ್ಯ ಪ್ರದೇಶ ವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಶಿವಶಂಕರರೆಡ್ಡಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಕುರೂಡಿ ಅರಣ್ಯ ಪ್ರದೇಶಕ್ಕೆ ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ನರ್ಸರಿಯಲ್ಲಿ 52 ಬಗೆಯ ಬೀದರಿನ ತಳಿಗಳನ್ನು ವೀಕ್ಷಿಸಿ ಮಾಹಿತಿ ಪಡೆದ ಬಳಿಕ ಎಚ್.ಎನ್.ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದ ಆಡಿಟೋರಿಯಂನಲ್ಲಿ ಜಿಲ್ಲಾ ಅರಣ್ಯ ಇಲಾಖೆಯ ಚಿತ್ರಗ್ಯಾಲರಿ ವೀಕ್ಷಿಸಿದರು.

    ತಾಲೂಕಿನಲ್ಲಿ ಬಿದಿರು ಮಾಹಿತಿ ಕೇಂದ್ರ ನಿರ್ಮಾಣಕ್ಕೆ ಅಗತ್ಯ ನೆರವು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂಬ ಶಾಸಕ ಶಿವಶಂಕರರೆಡ್ಡಿ ಮನವಿಗೆ ಸ್ಪಂದಿಸಿದ ಸಚಿವ ಕತ್ತಿ, ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಆಗಬೇಕಾಗಿರುವ ಯೋಜನೆಗಳು, ಬೇಕಾಗಿರುವ ಅನುದಾನದ ಕುರಿತು ವರದಿ ನೀಡುವಂತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಅಪರ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳಾದ ರಾಜಕಮಾಲ್, ವೆಂಕಟೇಶ್, ತಾಲೂಕು ಅರಣ್ಯ ಅಧಿಕಾರಿ ಚೇತನ್, ತಹಸೀಲ್ದಾರ್ ಎಚ್. ಶ್ರೀನಿವಾಸ್, ನಗರಸಭೆ ಆಯುಕ್ತ ಸತ್ಯನಾರಾಯಣ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

    ಮುಖ್ಯಮಂತ್ರಿಯಾಗುತ್ತೇನೆ: ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ಈಗಾಗಲೇ 8 ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ನನಗೆ ಇನ್ನು ವರ್ಷಗಳ ಕಾಲವಕಾಶವಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts