More

    ಬಿಪಿ, ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ

    ಬೆಳಗಾವಿ: ಜಿಲ್ಲೆಯು ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ನೋಡಲ್ ಅಧಿಕಾರಿ ಡಾ.ರಂಗಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.ಬಿಮ್ಸ್ ಆಸ್ಪತ್ರೆಯ ಜಿರಿಯಾಟ್ರಿಕ್ ವಾರ್ಡ್ ಎದುರಿನ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಕ್ಯಾನ್ಸರ್ ಜಾಗೃತಿ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆ 44 ಲಕ್ಷ ಜನಸಂಖ್ಯೆ ಹೊಂದಿದ ದೊಡ್ಡ ಜಿಲ್ಲೆ. ಆದ್ದರಿಂದ ಜಿಲ್ಲೆಯ ಅಸಾಂಕ್ರಾಮಿಕ ರೋಗಗಳ ಅಂಕಿ-ಸಂಖ್ಯೆಗಳು ರಾಜ್ಯಮಟ್ಟದಲ್ಲಿ ಹೆಚ್ಚಿನ ಪ್ರಭಾವ ಬೀರುತ್ತದೆ. ಅಲ್ಲದೆ, ಪ್ರಗತಿಗೆ ಕಾರಣವಾಗುತ್ತದೆ ಎಂದರು.

    ಕ್ಯಾನ್ಸರ್, ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ, ಪಾರ್ಶ್ವವಾಯು ಅಸಾಂಕ್ರಾಮಿಕ ರೋಗಗಳಾಗಿವೆ. ಈ ಕಾಯಿಲೆ ಬಾರದಂತೆ ತಡೆಯುವುದು ಹಾಗೂ ನಿಯಂತ್ರಣ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿ ವರ್ಷವೂ 30 ವರ್ಷ ಮೇಲ್ಪಟ್ಟ ಎಲ್ಲರೂ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ. ಪ್ರತಿ ಐದು ವರ್ಷಕ್ಕೆ ಒಮ್ಮೆ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ಇದೆಯೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಪೂರ್ವಭಾವಿ ತಪಾಸಣೆಗೆ ಒಳಪಡಬೇಕಾಗುತ್ತದೆ. ಸಮುದಾಯ ಸಹಕರಿಸಿದರೆ ನಮ್ಮ ಆರೋಗ್ಯ ಕಾರ್ಯಕರ್ತರು ಉತ್ತಮವಾಗಿ ಇಂತಹ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದರು.

    ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 28 ಲಕ್ಷದಷ್ಟು ನೋಂದಣಿಯಾಗಿದೆ. ಈ ಪ್ರಕ್ರಿಯೆಯನ್ನು ಇನ್ನೂ ಚುರುಕುಗೊಳಿಸಲಾಗುವುದು. ಈಗಾಗಲೇ ಬಹಳಷ್ಟು ಅಸಾಂಕ್ರಾಮಿಕ ರೋಗಿಗಳನ್ನು ಜಿಲ್ಲಾ ಮಟ್ಟದಲ್ಲಿ ಪತ್ತೆ ಹಚ್ಚಲಾಗಿದೆ. ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಇಲಾಖೆ ನೇತೃತ್ವದಲ್ಲಿ ಅತ್ಯಂತ ಅಚ್ಚು ಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಬಿಮ್ಸ್ ನಿರ್ದೇಶಕ ಡಾ. ಆರ್.ಜಿ. ವಿವೇಕಿ ಮಾತನಾಡಿ, ಕ್ಯಾನ್ಸರ್ ಕಾಯಿಲೆ ಕುರಿತಂತೆ ಒಂದು ವಾರ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಕ್ಯಾನ್ಸರ್ ಸಂಬಂಧಿಸಿದ ಲಕ್ಷಣಗಳು, ನೋವು ಇದ್ದವರನ್ನು ಸಮೀಪದ ಪ್ರಾಥಮಿಕ ಆರೋಗ್ಯ ಅಧಿಕಾರಿ, ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳನ್ನು ಕೂಡಲೇ ಸಂಪರ್ಕ ಮಾಡುವಂತೆ ತಿಳಿಸಬೇಕು. ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಕ್ಯಾನ್ಸರ್‌ನಿಂದಾಗುವ ಪ್ರಾಣಹಾನಿ ಕಡಿಮೆ ಮಾಡುವ ಪ್ರಯತ್ನವನ್ನು ಎಲ್ಲರೂ ಮಾಡಬೇಕು ಎಂದರು. ಬಿಮ್ಸ್ ಅಧೀಕ್ಷಕ ಡಾ.ಅಪ್ಪಾಸಾಹೇಬ ಪಾಟೀಲ್, ಜಿಲ್ಲಾ ಸರ್ಜನ್ ಡಾ.ಸರಸ್ವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ, ಡಿಎಸ್‌ಒ ಡಾ. ಬಿ.ಎನ್. ತುಕ್ಕಾರ, ಬೆಂಗಳೂರಿನ ಎನ್‌ಸಿಡಿ ಜಂಟಿ ನಿರ್ದೇಶಕ ಡಾ.ಶ್ರೀನಿವಾಸ,
    ಆರ್‌ಸಿಎಚ್‌ಒ ಡಾ. ಐ.ಪಿ. ಗಡಾದ, ಬೆಳಗಾವಿ ವಿಭಾಗದ ಸಹ ನಿರ್ದೇಶಕ ಡಾ.ಪ್ರಭು ಬಿರಾದಾರ, ಟಿಎಚ್‌ಒ ಡಾ.ಶಿವಾನಂದ ಮಾಸ್ತಿಹೊಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts