More

    ಬಿಸಿಯೂಟ ಸೇವನೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 9 ಮಕ್ಕಳು ಅಸ್ವಸ್ಥ

    ತ್ಯಾಗರ್ತಿ(ಶಿವಮೊಗ್ಗ): ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂಬತ್ತು ಮಕ್ಕಳು ಗುರುವಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ತೀವ್ರ ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳನ್ನು ರಾತ್ರಿ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ 51 ವಿದ್ಯಾರ್ಥಿಗಳಿದ್ದು, ರಾತ್ರಿ ಕೆಲವು ಮಕ್ಕಳಿಗೆ ವಾಂತಿ, ಜ್ವರ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ. ಬಿಸಿಯೂಟದ ಅಡುಗೆಗೆ ಬಳಸಿದ ನೀರು ಈ ಸಮಸ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಅಸ್ವಸ್ಥರಾಗಿದ್ದ ಮಕ್ಕಳು ಚೇತರಿಸಿಕೊಂಡಿದ್ದು ಪಾಲಕರು ಆತಂಕಪಡುವ ಅಗತ್ಯವಿಲ್ಲ ಹಾಗೂ ಇನ್ನುಳಿದ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇರಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಬಿಂಬಾ ತಿಳಿಸಿದ್ದಾರೆ. ಗುರುವಾರ ಬೋರ್‌ವೆಲ್ ನೀರು ಬಾರದೆ ಇದ್ದುದರಿಂದ ಶಾಲಾ ಆವರಣದಲ್ಲಿದ್ದ ಹಳೆಯ ಬಾವಿಯ ನೀರನ್ನು ತಂದು ಅಡುಗೆ ಮಾಡಲಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲಾಭಿವೃದ್ಧಿ ಸಮಿತಿ ಮುಖಂಡರು ಶಾಲೆಗೆ ಭೇಟಿ ನೀಡಿ ಸ್ವಚ್ಛತೆಯನ್ನು ಪರಿಶೀಲಿಸಿ ಬಾವಿ ನೀರಿನ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts