More

    ಬಿಸಿಲಿನ ತಾಪಕ್ಕೆ ಪಾರಾಗಲು ಕೈ ಜೋಡಿಸಿ

    ಬಳ್ಳಾರಿ : ಜಿಲ್ಲೆಯಲ್ಲಿ ಮಧ್ಯಾಹ್ನದ 01 ಗಂಟೆಯಿಂದ ಸಂಜೆ 04 ಗಂಟೆಯ ಅವಧಿಯಲ್ಲಿ ವಯೋ ವೃದ್ಧರು, ಮಕ್ಕಳು ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔಷಧಿ ಸೇವಿಸುವ ಪ್ರತಿಯೊಬ್ಬರು ಹೊರಗಡೆ ಹೋಗುವುದನ್ನು ತಪ್ಪಿಸಿ, ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಕೈ ಜೋಡಿಸಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶ ಬಾಬು ಕೋರಿದ್ದಾರೆ.
    ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ಒಆರ್ಎಸ್ ಜೀವಜಲ ಪುಡಿಯನ್ನು ಅಗತ್ಯವುಳ್ಳವರಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ರೋಗಿಗಳ ಆರೈಕೆಗಾಗಿ, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳಲಾಗಿದೆ. ಒಆರ್‌ಎಸ್. ದ್ರಾವಣವನ್ನು 1 ಲೀಟರ್ ನೀರಿಗೆ 1 ಪೊಟ್ಟಣದ ಸಂಪೂರ್ಣ ಪುಡಿಯನ್ನು ಹಾಕಿ 24 ಗಂಟೆಯೊಳಗಡೆ ಕುಡಿಯಲು ಬಳಸುವ ಮೂಲಕ ಬಿಸಿಲಿನ ಪ್ರಖರತೆಯಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.
    ಈಗಾಗಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ನಿರ್ಜಲೀಕರಣ ತಡೆಗಟ್ಟಲು ತುರ್ತು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜೊತೆಗೆ ಜಿಲ್ಲಾ ಕಾಲರಾ ತಂಡದಿಂದ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷಿಸಿ ಕುಡಿಯಲು ಯೋಗ್ಯವೆಂದು ಖಚಿತಪಡಿಸಿದ ನಂತರವೇ ಸರಬರಾಜು ಮಾಡಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts