More

    ಬಿಸಿಲಿನ ತಾಪ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ

    ಬಾಗಲಕೋಟೆ: ಪ್ರಸ್ತುತ ಹಾಗೂ ನಂತರದ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೀಟ್‌ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಾನಕಿ ಕೆ.ಎಂ ಕೋರಿದ್ದಾರೆ.

    ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ ಅಥವಾ ಛತ್ರಿ ಬಳಸುವಂತೆ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಿ. ಸಾದ್ಯವಾದಷ್ಟು ಹತ್ತಿಯ ಬಟ್ಟೆ, ಕೂಲಿಂಗ್ ಗ್ಲಾಸ್ ಧರಿಸಿರಿ. ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು. ಬೆಳಿಗ್ಗೆ ೧೧ ರಿಂದ ಸಂಜೆ ೪ ಗಂಟೆವರೆಗೆ ಹೊರಾಂಗಣ ದೈಹಿಕ ಚಟುವಟಿಕೆಗಳನ್ನು ಕಡಿಮೆ ಮಾಡಬೇಕು. ಸಾಕಷ್ಟು ಶುದ್ದ ನೀರು, ಮಜ್ಜಿಗೆ ಗ್ಲೂಕೋಸ್ ಮತ್ತು ಓಆರ್‌ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು.

    ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವAತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡುವುದು ಮತ್ತು ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದಾಗಿದೆ. ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು, ಓಆರ್‌ಎಸ್, ಮಜ್ಜಿಗೆಯಂತಹ ಪಾನಿಯಗಳನ್ನು ಬಳಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts