More

    ಬಿ.ಹರ್ಷವರ್ಧನ್ ಗೆಲುವಿನ ಬಳಿಕ ರಾಜಕೀಯ ನಿವೃತ್ತಿ

    ನಂಜನಗೂಡು: ಇದು ನನ್ನ ಕೊನೆಯ ಚುನಾವಣೆಯಾಗಿದ್ದು ನಂಜನಗೂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವ ಬಿ.ಹರ್ಷವರ್ಧನ್ ಗೆಲುವಿನೊಂದಿಗೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
    ತಾಲೂಕಿನ ಕಳಲೆ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಕಳಲೆ ಹಾಗೂ ಹೆಗ್ಗಡಹಳ್ಳಿ ಜಿ.ಪಂ. ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
    ಇದು ಕಾಂಗ್ರೆಸ್ ಪಕ್ಷದ ಶೆಟಲ್ ಬಸ್ ಅಲ್ಲ, ಬದಲಾಗಿ ಶಕ್ತಿಯುತ ಬಿಜೆಪಿ ಡಬಲ್ ಇಂಜಿನ್ ಸರ್ಕಾರವಾಗಿದ್ದು ದಶಕಗಳ ಸಮಸ್ಯೆಯಾಗಿದ್ದ ಪರಿವಾರ ಹಾಗೂ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಸಮಸ್ಯೆ ಬಗೆಹರಿಸಲಾಯಿತು. ಎಸ್ಟಿ ಮೀಸಲಾತಿಯನ್ನು ಶೆ.3 ರಿಂದ 7ಕ್ಕೆ ಏರಿಕೆ ಮಾಡಲಾಗಿದೆ. ನಂಜನಗೂಡಿನಲ್ಲಿ ಎರಡು ಸುಸಜ್ಜಿತ ವಾಲ್ಮೀಕಿ ಭವನ ನಿರ್ಮಿಸಲಾಗಿದ್ದು ಇದರೊಂದಿಗೆ ಕಳಲೆಯಲ್ಲಿ ವಾಲ್ಮೀಕಿ ಭವನಕ್ಕೆ ಜಾಗ ನೀಡಿ ಭವನ ನಿರ್ಮಾಣಕ್ಕೆ ಅವಶ್ಯವಾದ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
    ಶಾಸಕ ಬಿ.ಹರ್ಷವರ್ಧನ್ 5 ವರ್ಷಗಳಿಂದ ನಿರಂತರವಾಗಿ ಕ್ಷೇತ್ರದ ಜನರ ಸಂಪರ್ಕವಿಟ್ಟುಕೊಂಡು, ಸಮಸ್ಯೆ ಆಲಿಸಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಹೆಚ್ಚಿನ ರೀತಿ ಅಭಿವೃದ್ಧಿಗಾಗಿ ಶ್ರಮಿಸಲು ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿ ರಾಜಕೀಯ ಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.
    ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕಾಮಿಡಿ ಶೋನಂತಾಗಿದ್ದು ವಾರಕ್ಕೊಂದು ಎಪಿಸೋಡ್ ಬಿಡುಗಡೆಯಾಗುತ್ತಿದೆ. ಈ ಹಿಂದೆ 75 ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ಸಿಗರು ಬಡವರ ಪರವಾಗಿ ಯಾವುದೇ ಕಾರ್ಯಕ್ರಮ ರೂಪಿಸಲು ಸಾಧ್ಯವಾಗಲಿಲ್ಲ. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಿಸಾನ್ ಸಮ್ಮಾನ್ ಮೂಲಕ ರೈತರ ಖಾತೆಗಳಿಗೆ ನೇರವಾಗಿ ಹಣ ಹಾಕುತ್ತಿದೆ. ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ. ದಶಕಗಳ ಕನಸಾಗಿದ್ದ ನುಗು ಏತ ನಿರಾವರಿ ಯೋಜನೆಯನ್ನು ಜಾರಿಗೊಳಿಸಿದ್ದೇನೆ. ಬೆಳ್ಳಿ ರಥ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಗೌರಿಘಟ್ಟದ ನಾಯಕ ಭವನವನ್ನೂ ಪೂರ್ಣಗೊಳಿಸಿದ್ದೇನೆ. ವಾಲ್ಮೀಕಿ ಭವನಕ್ಕೂ ನಮ್ಮ ಸರಕಾರದ ಅಧಿಕಾರಾವಧಿಯಲ್ಲೇ ಅನುದಾನ ಬಿಡುಗಡೆಯಾಗಿದ್ದು ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕೆಲಸಗಳ ಮೇಲೆ ನಂಬಿಕೆಯಿಟ್ಟು ಮತ್ತೊಂದು ಅವಧಿಗೆ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
    ಕುಂಬ್ರಳ್ಳಿ ಸುಬ್ಬಣ್ಣ, ಜಿ.ಪಂ. ಮಾಜಿ ಸದಸ್ಯರಾದ ಸಿ.ಚಿಕ್ಕರಂಗನಾಯಕ, ಎಸ್.ಎಂ.ಕೆಂಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಪಿ.ಮಹೇಶ್, ತಾ.ಪಂ. ಮಾಜಿ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಮಾಜಿ ಸದಸ್ಯರಾದ ಕೊಂಗಳ್ಳಿಬಸವರಾಜು, ಬಿ.ಎಸ್.ರಾಮು, ಕೆ.ಡಿ.ಮಂಜು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಣೆನೂರು ಪರಶಿವಮೂರ್ತಿ, ಪ್ರಕಾಶ್, ಮಸಗೆರಾಜು, ಶಿರಮಳ್ಳಿಮಹದೇವಸ್ವಾಮಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts