More

    ಬೀಜ, ರಸಗೊಬ್ಬರ ಕೊರತೆಯಾಗದಿರಲಿ

    ಗದಗ: ಮುಂಗಾರು ಹಂಗಾಮು ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ಜರುಗಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

    ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿತ್ತನೆ ಹಂಗಾಮು ಪ್ರಾರಂಭವಾಗುವ ಸಂದರ್ಭದಲ್ಲಿ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ರಸಗೊಬ್ಬರದ ಕೃತಕ ಅಭಾವ ಸೃಷ್ಟಿಯಾಗದಂತೆ ನಿಗಾ ವಹಿಸಬೇಕು ಎಂದರು.

    ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮಾಹಿತಿ ಪಡೆದು ವರದಿ ಸಲ್ಲಿಸಬೇಕು. ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಗದಗ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಪಿಂಚಣಿ ಯೋಜನೆಗಳು ಸ್ಥಗಿತಗೊಂಡಿದ್ದು, ಈ ಕುರಿತು ಶೀಘ್ರವೇ ಕ್ರಮ ಜರುಗಿಸಬೇಕು. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸಲು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ ಕೆ., ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ. ಮತ್ತಿತರರು ಇದ್ದರು.

    ಗುಣಮಟ್ಟದ ಬೀಜ ವಿತರಿಸಿ

    ಶಿರಹಟ್ಟಿ: ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬೀಜ ಮತ್ತು ಕೃಷಿ ಪರಿಕರ ಮಾರಾಟ ಅಂಗಡಿಗಳಿಗೆ ಶಿರಹಟ್ಟಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ಭೇಟಿ ನೀಡಿ ಪರಿಶೀಲಿಸಿದರು. ಕಳಪೆ ಬೀಜಗಳನ್ನು ಮಾರಾಟ ಮಾಡಿದ್ದು ಕಂಡು ಬಂದರೆ ವ್ಯಾಪಾರಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರೈತರಿಗೆ ಪ್ರಮಾಣೀಕರಿಸಿದ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ಮಾಡುವುದರ ಜತೆಗೆ ಕಡ್ಡಾಯವಾಗಿ ರಶೀದಿ ನೀಡಬೇಕು ಎಂದರು. ಅಲ್ಲದೆ, ಅಂಗಡಿಗಳಲ್ಲಿ ಸೂಚನಾ ಫಲಕದಲ್ಲಿ ದರ, ದಾಸ್ತಾನು ಇತ್ಯಾದಿ ಸ್ಪಷ್ಟವಾಗಿ ಬರೆಯಬೇಕು. ಒಂದು ವೇಳೆ ನಿಯಮ ಪಾಲನೆ ಮಾಡದೆ ವ್ಯಾಪಾರ ಮಾಡಿದರೆ, ರೈತರಿಂದ ದೂರುಗಳು ಕೇಳಿ ಬಂದರೆ ಅಂತಹ ಅಂಗಡಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts