More

    ಬೀದಿ ವ್ಯಾಪಾರಸ್ಥರ ನಿಗಮ ರಚನೆಗೆ ಯತ್ನ

    ಹುಬ್ಬಳ್ಳಿ: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ ಪ್ರತ್ಯೇಕ ನಿಗಮ ರಚಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಬೀದಿ ಬದಿ ವ್ಯಾಪಾರಸ್ಥರನ್ನು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲರನ್ನಾಗಿಸಬೇಕಿದೆ ಎಂದರು.

    ಬಲಿಷ್ಠ ಸಂಘಟನೆ ಕಟ್ಟಿಕೊಳ್ಳುವ ಮೂಲಕ ದೌರ್ಜನ್ಯಗಳನ್ನು ತಡೆಗಟ್ಟುವ ಜತೆಗೆ ಸರ್ಕಾರದಿಂದ ಕಾನೂನಾತ್ಮಕ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಬೀದಿ ವ್ಯಾಪಾರಸ್ಥರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸದೆ ಅವರನ್ನು ಒಕ್ಕಲೆಬ್ಬಿಸಬಾರದು ಎಂದು ಹೇಳಿದರು.

    ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ನಿತ್ಯೋಪಯೋಗಿ ವಸ್ತುಗಳ ದರ ಏರಿಸುವ ಮೂಲಕ ಬೀದಿ ಬದಿ ವ್ಯಾಪಾರಸ್ಥರು ಹೆಚ್ಚು ಹಣ ಗಳಿಸಬಹುದು. ಆದರೆ ಬಡ ಜನರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಕಡಿಮೆ ಲಾಭದಲ್ಲಿ ಇವರು ವ್ಯಾಪಾರ ಮಾಡುತ್ತಿದ್ದಾರೆ. ರಾಷ್ಟ್ರ ನಿರ್ವಣದಲ್ಲಿ ಈ ವ್ಯಾಪಾರಿಗಳ ಪಾತ್ರ ಮಹತ್ವವಾದದ್ದು ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸಿ.ಇ. ರಂಗಸ್ವಾಮಿ, ಬೀದಿ ಬದಿ ವ್ಯಾಪಾರಸ್ಥರಿಗೆ ಎಲ್ಲ ಸೌಲಭ್ಯಗಳುಳ್ಳ ಮಾರುಕಟ್ಟೆ ನಿರ್ವಿುಸಬೇಕು. ಆತ್ಮನಿರ್ಭರ ಯೋಜನೆಯಡಿ ಸಾಲ ಒದಗಿಸಬೇಕು. ಇವರ ಮಕ್ಕಳಿಗೆ ಶಾಲೆಗಳಲ್ಲಿ ಉಚಿತ ಪ್ರವೇಶ ನೀಡಬೇಕು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿದರು. ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ, ಗ್ರಾಮೀಣ ಅಧ್ಯಕ್ಷ ಅನಿಲ ಪಾಟೀಲ, ಮೋಹನ ಅಸುಂಡಿ, ಪ್ರೇಮನಾಥ ಚಿಕ್ಕತುಂಬಳ, ಗುರುನಾಥ ಉಳ್ಳಿಕಾಶಿ, ರಿಯಾಜ್ ಅಹ್ಮದ್ ದಾಲಾಯತ್, ಜಾವೇದ್ ಟಿನವಾಲೆ, ಅನ್ವರ ಶಿರಹಟ್ಟಿ, ಹಾಗೂ ಇತರರಿದ್ದರು. ಇದಕ್ಕೂ ಮುಂಚೆ ಎಂ.ಜಿ. ಮಾರ್ಕೆಟ್​ನಿಂದ ನ್ಯೂ ಕಾಟನ್ ಮಾರ್ಕೆಟ್​ನ ಸಾಂಸ್ಕೃತಿಕ ಭವನದವರೆಗೆ ಬೀದಿ ಬದಿ ವ್ಯಾಪಾರಿಗಳು ಮೆರವಣಿಗೆ ನಡೆಸಿದರು.</

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts