More

    ಬೀರೂರಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಮನವಿ

    ಶಿವಮೊಗ್ಗ: ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ರೈಲು ಸೇವೆ ಇತ್ತೀಚೆಗೆ ಆರಂಭಗೊಂಡಿದೆ. ಮಲೆನಾಡು ಭಾಗಕ್ಕೂ ವಿಸ್ತರಣೆಗೊಳಿಸುವ ಕನಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

    ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿವರೆಗೆ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲನ್ನು ಬಿರೂರಿನಲ್ಲಿ ನಿಲುಗಡೆಗೆ ಅವಕಾಶ ಕೊಟ್ಟರೆ ಈ ಭಾಗದ ಪ್ರಯಾಣಿಕರಿಗೂ ಅನುಕೂಲವಾಗಲಿದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಬಳಿ ಮನವಿ ಮಾಡಿಕೊಂಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಳಿದಂತೆ ಶಿವಮೊಗ್ಗ ವಿಭಾಗದಲ್ಲಿ ಹಳೇ ಬೋಗಿಗಳ ಬದಲಾವಣೆ ಸೇರಿದಂತೆ ಕೆಲವೊಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
    ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ 265 ಬಿಎಸ್‌ಎನ್‌ಎಲ್ ಟವರ್‌ಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರಲ್ಲಿ 100 ಟವರ್‌ಗಳನ್ನು 2024ರ ಏಪ್ರಿಲ್‌ನೊಳಗೆ ಅಳವಡಿಸುವಂತೆ ದೂರು ಸಂಪರ್ಕ ಸಚಿವರೂ ಆಗಿರುವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಮಾಡಲಾಗಿದೆ. ಜಾಗದ ಸಮಸ್ಯೆ, ಅರಣ್ಯ ಸಮಸ್ಯೆಗಳಿದ್ದ ಕಾರಣ ಟವರ್‌ಗಳ ಅಳವಡಿಕೆ ಕಾರ್ಯ ವಿಳಂಬವಾಗಿದೆ. ಈಗ ಬಹುತೇಕ ಎಲ್ಲ ಸಮಸ್ಯೆಗಳೂ ಬಗೆಹರಿದಿದ್ದು ತ್ವರಿತವಾಗಿ ಟವರ್‌ಗಳ ಅಳವಡಿಕೆ ಕಾರ್ಯ ಕೈಗೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts