More

    ಬೀರೂರು-ಬುಕ್ಕಾಂಬುದಿ ರಸ್ತೆ ದುರಸಿಗೊಳಿಸಿ

    ಅಜ್ಜಂಪುರ: ಬೀರೂರಿನಿಂದ ಬುಕ್ಕಾಂಬುದಿವರೆಗಿನ ಅಜ್ಜಂಪುರ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಗುರುವಾರ ಅಜ್ಜಂಪುರ- ಟೋಲ್ ಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು. ಬೀರೂರಿನಿಂದ ಬುಕ್ಕಾಂಬುದಿವರೆಗೆ ಸೇತುವೆಗಳು ಕುಸಿದಿವೆ. ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ಯಾರೊಬ್ಬರೂ ದುರಸ್ತಿಗೆ ಕ್ರಮಕೈಗೊಂಡಿಲ್ಲ. ಕೇವಲ ಹಣ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಯಾರೂ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ರಸ್ತೆ ಗುಂಡಿ ಬಿದ್ದಿರುವುದರಿಂದ ಬಹಳಷ್ಟು ಅಪಘಾತಗಳು ಸಂಭವಿಸಿವೆ. ಬುಕ್ಕಾಂಬುದಿ ಗ್ರಾಮದ ರಸ್ತೆ ಪಕ್ಕದ ಮನೆಗೆ ಲಾರಿ ನುಗ್ಗಿತ್ತು. ದುರಸ್ತಿಗೊಳಿಸುವಂತೆ ಅಜ್ಜಂಪುರ ಪೊಲೀಸ್ ಠಾಣೆ ಟೋಲ್ ಕೇಂದ್ರಕ್ಕೆ ಬಹಳಷ್ಟು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ ಪ್ರಯೋಜನವಾಗಿಲ್ಲ. ಟೋಲ್ ಸಂಗ್ರಹಿಸುವಾಗ ಅನುಸರಿಸಬೇಕಾದ ಯಾವುದೇ ಕ್ರಮ ಇಲ್ಲಿ ಪಾಲನೆಯಾಗುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಬೇಕು. ಅಲ್ಲಿಯವರೆಗೂ ಟೋಲ್ ಸಂಗ್ರಹಿಸಬಾರದು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

    ಸ್ಥಳಕ್ಕೆ ಆಗಮಿಸಿದ ಅಜ್ಜಂಪುರ ಇನ್ಸ್​ಪೆಕ್ಟರ್ ಲಿಂಗರಾಜು ಮಾತನಾಡಿ, ಕೂಡಲೇ ಮೇಲಿನ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುಂತೆ ತಿಳಿಸಬೇಕು. ಅಲ್ಲಿಯವರೆಗೂ ಟೋಲ್ ಸಂಗ್ರಹಿಸಬಾರದು ಎಂದು ಟೋಲ್ ಸಿಬ್ಬಂದಿಗೆ ತಾಕೀತು ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts