More

    ಬುಡಾದಿಂದ ಅನಧಿಕೃತ ಕಟ್ಟಡ ತೆರವು

    ಬೆಳಗಾವಿ: ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರ (ಬುಡಾ)ದ ರಾಮತೀರ್ಥ ನಾಗರಿಕ ಸೌಲಭ್ಯ ನಿವೇಶನದ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡವನ್ನು ಬುಡಾ ಅಧಿಕಾರಿಗಳು ಬುಧವಾರ ತೆರವುಗೊಳಿಸುವ ಮೂಲಕ ಬಿಸಿ ಮುಟ್ಟಿಸಿದರು.

    ರಾಮತೀರ್ಥ ನಾಗರಿಕ ಸೌಲಭ್ಯ ನಿವೇಶನದ ಪ್ರದೇಶದಲ್ಲಿ ಕೆಲ ನಿವೇಶಗಳನ್ನು ಮೀಸಲಿಡಲಾಗಿದೆ. ಆ ನಿವೇಶನಗಳಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಳ್ಳುತ್ತಿರುವವರಿಗೆ ಎಚ್ಚರಿಕೆ ನೀಡಿದರೂ ಕಟ್ಟಡ ನಿರ್ಮಾಣ ಮಾಡಿಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಬುಡಾ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿದರು. ಇದರಿಂದಾಗಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಳ್ಳುತ್ತಿರುವವರಿಗೆ ಬುಡಾ ಅಧಿಕಾರಿಗಳು ಎಚ್ಚರಿಕೆ ರವಾನಿಸಿದರು.

    ಬೆಳಗಾವಿ ನಗರದ ಹೊರ ವಲಯದಲ್ಲಿ ಅನಧಿಕೃತವಾಗಿ ಬಡಾವಣೆಗಳಲ್ಲಿ ಯಾವುದೇ ಮನೆಗಳನ್ನು ನಿರ್ಮಿಸಬೇಡಿ. ಅಲ್ಲದೆ, ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಿಸಿಕೊಂಡರೆ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಸಾರ್ವಜನಿಕರು ಮನೆ ಕಟ್ಟುವ ಮುನ್ನ ದಾಖಲೆಗಳನ್ನು ಪರಿಶೀಲನೆ ನಡೆಸಿ ಸಂಬಂಧಿಸಿದ ಬುಡಾ, ಪಾಲಿಕೆಯಿಂದ ಕಟ್ಟಡ ಪರವಾನಗಿ ಪಡೆದುಕೊಳ್ಳಬೇಕು ಎಂದು ಬುಡಾ ಆಯುಕ್ತ ಪ್ರೀತಂ ನಸ್ಲಾಪುರ ತಿಳಿಸಿದ್ದಾರೆ.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts