More

    ಬೂತ್‌ಗಳೇ ಪಕ್ಷದ ಅಡಿಪಾಯ ; ಅವು ಗಟ್ಟಿಯಾಗಬೇಕು: ಬಿ.ವೈ.ರಾಘವೇಂದ್ರ

    ಶಿಕಾರಿಪುರ: ಬೂತ್‌ಗಳು ಅಡಿಪಾಯವಿದ್ದಂತೆ, ಮೊದಲು ಅವು ಗಟ್ಟಿಯಾಗಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು, ಸಾಕಷ್ಟು ಜನ ಪರ ಯೋಜನೆಗಳನ್ನು ರೂಪಿಸಲಾಗಿದೆ. ಅವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಅವರ ವಿಶ್ವಾಸ ಗಳಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
    ಮಂಗಳವಾರ ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುಸಿಂಗ್ ನಿವಾಸದಲ್ಲಿ ಬೂತ್ ವಿಜಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಕ್ತಿ ಕೇಂದ್ರ ಮತ್ತು ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಸಮೀಕ್ಷೆ ಮಾಡಿ, ಅಲ್ಲಿನ ಲೋಪದೋಷಗಳನ್ನು ಸ್ಥಳೀಯ ಹಿರಿಯ ನಾಯಕರ ಗಮನಕ್ಕೆ ತರಬೇಕು ಎಂದು ಹೇಳಿದರು.
    ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿ ಮತ್ತೆ ಅಧಿಕಾರ ಹಿಡಿಯಬೇಕು ಎನ್ನುವುದೇ ನಮ್ಮ ಗುರಿ. ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು. ಪ್ರತಿಯೊಬ್ಬ ಕಾರ್ಯಕರ್ತ ಸಹ ಪ್ರಮುಖ. ಯಾರನ್ನೂ ಉಪೇಕ್ಷೆ ಮಾಡಬಾರದು. ಪ್ರತಿಯೊಬ್ಬರ ಪರಿಶ್ರಮದಿಂದ ಪಕ್ಷ ಕಟ್ಟಲಾಗಿದೆ ಎಂದು ಹೇಳಿದರು.
    ಬಿಎಸ್‌ವೈ ರೋಲ್ ಮಾಡೆಲ್
    ತಾಲೂಕಿನಲ್ಲಿ ಪಕ್ಷವನ್ನು ಇನ್ನೂ ಸದೃಢಗೊಳಿಸಬೇಕು. ಪಕ್ಷ ಸಂಘಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮಗೆ ಯಾವಾಗಲೂ ರೋಲ್ ಮಾಡೆಲ್. ಅವರ ಪರಿಶ್ರಮದ ಫಲವಾಗಿ, ಎಲ್ಲರ ಸಹಕಾರದಿಂದ ಬಿಜೆಪಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಿತು ಎಂದು ಬಿ.ವೈ. ವಿಜಯೇಂದ್ರ ಹೇಳಿದರು. ಯಡಿಯೂರಪ್ಪ ಅವರದು ನಿರಂತರ ಜನಪರ ಹೋರಾಟ. ಶರಣರ ಚಿಂತನೆಯಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಅವರು ಅಧಿಕಾರದಲ್ಲಿದ್ದಾಗ ಎಲ್ಲಾ ಧರ್ಮ, ಜಾತಿ ಮತ್ತು ಸಮುದಾಯಗಳ ಅಭಿವೃದ್ಧಿ ಗೆ ಅನುದಾನ ನೀಡಿದ್ದಾರೆ ಎಂದರು. ಇಡೀ ಶಿಕಾರಿಪುರ ತಾಲೂಕು ಬಿ.ಎಸ್.ಯಡಿಯೂರಪ್ಪ ಮತ್ತು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸಾಮಾಜಿಕ ಕಳಕಳಿಯ ಫಲವಾಗಿ ಅಭಿವೃದ್ಧಿಯಿಂದ ಪ್ರಕಾಶಿಸುತ್ತಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts