More

    ಬೂದಿಗೆರೆ ಗ್ರಾಪಂ ವ್ಯಾಪ್ತಿಯ ಕೆರೆಗಳಿಗೆ ನೀರು; ಮಾಜಿ ಸಚಿವ ಕೃಷ್ಣಭೈರೇಗೌಡ ಭರವಸೆ; ಗ್ರಾಪಂ ಕಟ್ಟಡದ ಮೊದಲ ಅಂತಸ್ತಿನ ಕಾಮಗಾರಿಗೆ ಶಂಕುಸ್ಥಾಪನೆ

    ಚನ್ನರಾಯಪಟ್ಟಣ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿರುವ ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸುವ ಬಗ್ಗೆ ಶಾಸಕರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲೇ ನೀರು ಹರಿಸಲಾಗುತ್ತದೆ ಎಂದು ಬೆಂ.ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮಾಜಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

    ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿ ಕಚೇರಿಯ ಮೊದಲ ಹಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ಜಿಪಂ, ತಾಪಂನಿಂದ ಕಟ್ಟಡಕ್ಕೆ ಸುಮಾರು 35 ಲಕ್ಷ ರೂ., ಅನುದಾನ ಮಂಜೂರಾಗಿದ್ದು, ಈಗಾಗಲೇ ತಾಲೂಕಿನಲ್ಲಿ ಈಗಾಗಲೇ 6 ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ದೇವನಹಳ್ಳಿ ತಾಲೂಕಿನ ಎಲ್ಲ ಕೆರಗಳಿಗೂ ನೀರು ಹರಿಸಲು ಯೋಜನೆ ರೂಪಿಸಲಾಗುತ್ತದೆ. ಈ ಕಾರ್ಯಕ್ಕೆ ನನ್ನ ಕ್ಷೇತ್ರದ ಅನುದಾನವನ್ನೂ ನೀಡುತ್ತೆನೆ ಎಂದರು.

    ಶಾಸಕ ನಿಸರ್ಗ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ಸಾಗುತ್ತಿತ್ತು. ಮೈತ್ರಿ ಸರ್ಕಾರ ಬದಲಾವಣೆಯಾದ ನಂತರ ಇದ್ದಕ್ಕಿದ್ದಂತೆ ಬಿಡುಗಡೆಯಾಗಿದ್ದ ಅನುದಾನ ತಡೆಹಿಡಿಯಲಾಗಿತ್ತು. ಆದರೂ ಸಹ ಛಲ ಬಿಡದೇ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ ಎಂದರು.

    ಲೋಕಸಭಾ ಮಾಜಿ ಸದಸ್ಯ ಸಿ.ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷೆ ಜಯಮ್ಮ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ರವಿಕುಮಾರ್, ಜಿಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಪಿಎಂಸಿ ಮಾಜಿ ಅಧ್ಯಕ್ಷೆ ಅಮರಾವತಿ,ಎಪಿಎಂಸಿ ಉಪಾಧ್ಯಕ್ಷ ಸುಧಾಕರ್, ಜಿಪಂ ಸದಸ್ಯರಾದ ಅನಂತಕುಮಾರಿ ಚಿನ್ನಪ್ಪ, ತಾಪಂ ಅಧ್ಯಕ್ಷೆ ಚೈತ್ರಾ ವೀರೇಗೌಡ, ಮಾಜಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್‌ಗೌಡ, ಬೂದಿಗೆರೆ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್‌ಗೌಡ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts