More

    ಬೃಹತ್ ಉದ್ಯೋಗ ಮೇಳ ಇಂದು

    ಕಲಬುರಗಿ: ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಜನ್ಮದಿನ ನಿಮಿತ್ತ ಎನ್.ವಿ. ಮೈದಾನದಲ್ಲಿ ಶುಕ್ರವಾರ ಬೃಹತ್ ಉದ್ಯೋಗ ಮೇಳವನ್ನು ದಿ.ಚಂದ್ರಶೇಖರ ಪಾಟೀಲ್ ರೇವೂರ ಅಭಿಮಾನಿಗಳ ಬಳಗ ಹಮ್ಮಿಕೊಂಡಿದ್ದು, ಬೆಳಗ್ಗೆ 8ಕ್ಕೆ ಉದ್ಯೋಗ ಆಕಾಂಕ್ಷಿಗಳ ಸಂದರ್ಶನ ಶುರು ಆಗಲಿದೆ.
    ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಡಾ.ಶರಣಬಸವಪ್ಪ ಅಪ್ಪ ಬೆಳಗ್ಗೆ 10.30ಕ್ಕೆ ಮೇಳ ಉದ್ಘಾಟಿಸಲಿದ್ದಾರೆ. ಅನೇಕ ಮಠಾಧೀಶರ ಸಾನ್ನಿಧ್ಯದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಭಾಗವಹಿಸಲಿದ್ದಾರೆ.
    ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಸೇಡಂ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ನರಸಿಂಹ ನಾಯಕ, ಸುಭಾಷ ಗುತ್ತೇದಾರ್, ಬಸವರಾಜ ಮತ್ತೀಮೂಡ, ಡಾ.ಅವಿನಾಶ ಜಾಧವ್, ಬಿ.ಜಿ. ಪಾಟೀಲ್, ಡಾ.ರಾಜಕುಮಾರ ಪಾಟೀಲ್ ತೆಲ್ಕೂರ, ಸಂಸದ ಡಾ.ಉಮೇಶ ಜಾಧವ್, ಮಾಜಿ ಸಚಿವರಾದ ಬಾಬುರಾವ ಚಿಂಚನಸೂರ, ಮಾಲೀಕಯ್ಯ ಗುತ್ತೇದಾರ್, ಸುನಿಲ್ ವಲಾ್ಲೃಪುರೆ, ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಅಮರನಾಥ ಪಾಟೀಲ್, ವಾಲ್ಮೀಕಿ ನಾಯಕ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಶಶೀಲ್ ನಮೋಶಿ, ಬಿಜೆಪಿ ಯುವ ಮುಖಂಡ ಚಂದು ಪಾಟೀಲ್, ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದಶರ್ಿ ಬಸವರಾಜ ದೇಶಮುಖ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಡಾ.ಅಲೋಕ ಪಾಟೀಲ್ ರೇವೂರ, ಕುಡಾ ಮಾಜಿ ಅಧ್ಯಕ್ಷ ದಯಾಘನ್ ಧಾರವಾಡಕರ್ ಪಾಲ್ಗೊಳ್ಳುವರು.

    150ಕ್ಕೂ ಹೆಚ್ಚು ಕಂಪನಿ ಭಾಗಿ
    ಮೇಳದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಬೆಂಗಳೂರು, ಪುಣೆ, ಹೈದರಾಬಾದ್, ಹುಬ್ಬಳ್ಳಿ, ಬೆಳಗಾವಿ ಸೇರಿ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. 15000ಕ್ಕೂ ಹೆಚ್ಚು ಅಭ್ಯಥರ್ಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎನ್ವಿ ಮೈದಾನದಲ್ಲಿ 150 ಸ್ಟಾಲ್ಗಳನ್ನು ಹಾಕಲಾಗಿದೆ. ಕಲ್ಯಾಣ ಕನರ್ಾಟಕದ ಅದರಲ್ಲೂ ವಿಶೇಷವಾಗಿ ಕಲಬುರಗಿ ಜಿಲ್ಲೆಯವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಮೇಳಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಪ್ರಚಾರ ಮಾಡಲಾಗಿದೆ.

    ಉದ್ಯೋಗ ಮೇಳ ವಿನೂತನ ಪ್ರಯೋಗ. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಜನ್ಮದಿನದಂದು ಸಾವಿರಾರು ಯುವಕರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಮೇಳದಲ್ಲಿ ಸ್ಟಾಲ್ ಹಾಕಲು 150 ಕಂಪನಿಗಳು ಮುಂದೆ ಬಂದಿವೆ. ಒಟ್ಟಾರೆ ಮೇಳದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
    | ಅಪ್ಪು ಕಣಕಿ
    ಅಧ್ಯಕ್ಷ, ದಿ.ಚಂದ್ರಶೇಖರ ಪಾಟೀಲ್ ರೇವೂರ ಅಭಿಮಾನಿಗಳ ಬಳಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts