More

    ಬೆಂಗಳೂರಿಂದ ಕೇರಳಕ್ಕೆ ಡ್ರಗ್ಸ್: ಮಂಗಳೂರು ಪೊಲೀಸರು ಬಂಧಿಸಿದ ಆರೋಪಿ ಮಾಹಿತಿ

    ಮಂಗಳೂರು: ಎಂಡಿಎಂಎ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೈಜೀರಿಯಾದ ಪ್ರಜೆ ಸ್ಟಾೃನ್ಲಿ ಚಿಮಾ ಎಂಬಾತನೊಂದಿಗೆ ಕೊಣಾಜೆ ಪೊಲೀಸರು ಬಂಧಿಸಿರುವ ಉಪ್ಪಳ ನಿವಾಸಿ ರಮೀಜ್ ಕೇರಳದ ಎಲ್ಲ 14 ಜಿಲ್ಲೆಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂಬ ಅಂಶ ತನಿಖೆಯಿಂದ ಬಹಿರಂಗವಾಗಿದೆ.

    ಬಂಧಿತ ನೈಜೀರಿಯಾದ ವ್ಯಕ್ತಿ ಕುರಿತಂತೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಎನ್‌ಡಿಪಿಎಸ್ ಕಾಯ್ದೆ ಹಾಗೂ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಬಂಧನದ ವೇಳೆ ನೈಜೀರಿಯಾ ಪ್ರಜೆ ಪೊಲೀಸರೊಂದಿಗೆ ಕ್ರೂರವಾಗಿ ವರ್ತಿಸಿದ್ದ. ಇಬ್ಬರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಬಳಿಕ ಪೊಲೀಸ್ ಕಸ್ಟಡಿಗೆ ಪಡೆದು ಮತ್ತಷ್ಟು ತನಿಖೆಗೊಳಪಡಿಸಲಾಗುವುದು. ಇಬ್ಬರಿಂದ ಈಗಾಗಲೇ ಸಾಕಷ್ಟು ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

    ರಮೀಜ್ ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಯಿಂದ ವಾರಕ್ಕೆ ಇಂತಿಷ್ಟು ಪ್ರಮಾಣದಲ್ಲಿ ಡ್ರಗ್ಸ್ ಖರೀದಿಸಿ ಅದನ್ನು ಕೇರಳದ ಜಿಲ್ಲೆಗಳಲ್ಲಿ ತನ್ನ ಗ್ರಾಹಕರಿಗೆ ಪೂರೈಕೆ ಮಾಡುತ್ತಿದ್ದ. ಮಾತ್ರವಲ್ಲದೆ ಮಂಗಳೂರನ್ನು ಗುರಿಯಾಗಿಸಿ ಬಹಳಷ್ಟು ಗ್ರಾಹಕರನ್ನು ಸಂಪರ್ಕಿಸಲು ಪ್ರಯತ್ನಿಸಿರುವುದು ತನಿಖೆಯಿಂದ ತಿಳಿದು ಬಂದಿದೆ. ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಎಸಿಪಿ ರಂಜಿತ್ ಕುಮಾರ್ ಬಂಡಾರು ನೇತೃತ್ವದ ತಂಡ ಈ ಮೂಲಕ ಡ್ರಗ್ಸ್ ಪೂರೈಕೆ, ಸಾಗಾಟಕ್ಕೆ ಸಂಬಂಧಿಸಿ ಬಹುದೊಡ್ಡ ಪ್ರಕರಣವನ್ನು ಭೇದಿಸಿದ್ದು, ಕಳೆದ ಹಲವು ಸಮಯದಿಂದ ಈ ತಂಡ ಡ್ರಗ್ಸ್ ವಿರುದ್ಧ ದೊಡ್ಡ ಮಟ್ಟದ ಅಭಿಯಾನ ನಡೆಸಿದೆ. ಮಂಗಳೂರು ಡ್ರಗ್ಸ್ ಮುಕ್ತ ಮಾಡುವಲ್ಲಿ ಈ ತಂಡ ಸಕ್ರಿಯವಾಗಿದೆ ಎಂದು ಎನ್.ಶಶಿಕುಮಾರ್ ತಿಳಿಸಿದರು.

    ನೈಜೀರಿಯಾ ಮೂಲದ ಬಂಧಿತ ಆರೋಪಿ 2018ರಲ್ಲಿ ಕೆಆರ್ ಪುರಂನಲ್ಲಿ ಪಾಸ್‌ಪೋರ್ಟ್ ಅವಧಿ ಮುಗಿದ ಬಳಿಕ ಅಕ್ರಮವಾಗಿ ನೆಲೆಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ. ಉನ್ನತ ವ್ಯಾಸಂಗಕ್ಕಾಗಿ ಬಂದು ಇಂತಹ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts