More

    ಬೆಳಗಾವಿಗೆ 100 ಹಾಸಿಗೆಯ ಇಎಸ್‌ಐ ಆಸ್ಪತ್ರೆ

    ಬೆಳಗಾವಿ: ಚಂದೀಗಢ ನಗರದಲ್ಲಿ ಜರುಗಿದ 190ನೇ ಇಎಸ್‌ಐ ಕಾರ್ಪೋರೇಷನ್ ಸಭೆಯಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಐ.ಸಿ. ಆಸ್ಪತ್ರೆ ಸ್ಥಾಪಿಸಲು ಅನುಮೋದನೆ ನೀಡಿರುವ ಕುರಿತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

    ಸೋಮವಾರ ಪ್ರಕಟಣೆ ನೀಡಿರುವ ಅವರು, 2 ವರ್ಷಗಳ ಸತತ ಪ್ರಯತ್ನದಿಂದ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು. ರಾಜ್ಯಸಭೆಯ ಕಲಾಪದ ಶೂನ್ಯ ಮತ್ತು ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು. ಜಿಲ್ಲೆಯಲ್ಲಿ 1.25 ಸಾವಿರಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕರಿದ್ದು, ಈ ಎಲ್ಲ ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ಸೇವೆ ದೊರೆಯಲಿದೆ ಎಂದಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡಲಿರುವ ಮುಂಚೆಯೇ ಕೇಂದ್ರ ಸರ್ಕಾರ ಬೆಳಗಾವಿ ಜನೆತೆಗೆ ಒಂದು ಸಂತಸ ಸುದ್ದಿ ನೀಡಿದೆ. ಅದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಮತ್ತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಕಿತ್ತೂರು ಕರ್ನಾಟಕ ಜನರ ಪರವಾಗಿ ಸಂಸದರು ಅಭಿನಂದಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts