More

    ಬೆಳಗಾವಿ ಜಿಲ್ಲಾದ್ಯಂತ ಉತ್ತಮ ಮಳೆ

    ಬೆಳಗಾವಿ: ಕಳೆದೆರಡು ದಿನಗಳಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಸೋಮವಾರ ರಾತ್ರಿ ಹಾಗೂ ಮಂಗಳವಾರ ದಿನವೀಡಿ ತುಂತುರು ಮಳೆ ಸುರಿದಿದ್ದು, ಅಲ್ಲಲ್ಲಿ ಮಳೆಯಿಂದಾಗಿ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

    ಜಿಲ್ಲಾದ್ಯಂತ ಹಾಗೂ ಮಹಾರಾಷ್ಟ್ರ, ಪಶ್ಚಿಮ ಘಟ್ಟದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ಹಾಗೂ ಮಲಪ್ರಭಾ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಕೃಷಿಕರ ಮುಖದಲ್ಲಿ ಮಂದಹಾಸ ಮೂಡಿದೆ. ಬೆಳಗಾವಿ, ಖಾನಾಪುರ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಗೋಕಾಕ, ಯರಗಟ್ಟಿ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕಿನ ಬಹುತೇಕ ಪ್ರದೇಶಗಳಲ್ಲಿ ಸೋಮವಾರ ರಾತ್ರಿಯಿಂದಲೇ ಉತ್ತಮ ಮಳೆ ಸುರಿದಿದೆ.

    ಬೆಳಗಾವಿ ನಗರದಲ್ಲಿಯೂ ನಿರಂತರವಾಗಿ ಜಿಟಿಜಿಟಿ ಮಳೆ ಸುರಿದಿದ್ದು, ಇಲ್ಲಿನ ಶಹಾಪುರದಲ್ಲಿನ ಸರಾಫ್ ಗಲ್ಲಿಯಲ್ಲಿ ವಿದ್ಯುತ್ ಕಂಬ ನೆಲಕ್ಕುರುಳಿದೆ. ಖಾನಾಪುರ ತಾಲೂಕಿನಲ್ಲಿ ಗೋವಾ ರಸ್ತೆಯಲ್ಲಿ ಬೃಹತ್ ಮರ ಧರೆಗುರಳಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಮರ ತೆರುವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿದ್ದಾರೆ. ಇನ್ನು ಮಲಪ್ರಭಾ ನದಿ ಜಲಾಶಯಕ್ಕೆ 657 ಕ್ಯೂಸೆಕ್ ಹಾಗೂ ಘಟಪ್ರಭಾ ನದಿಯ ಜಲಾಶಯಕ್ಕೆ 8,997 ಕ್ಯೂಸೆಕ್ ಒಳಹರಿವು ಬರುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts