More

    ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ಆರಂಭಿಸಿ

    ಬೆಳಗಾವಿ: ಬೆಳಗಾವಿ-ಬೆಂಗಳೂರು ಮಧ್ಯೆ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭಿಸುವಂತೆ ಒತ್ತಾಯಿಸಿ ಸಂಸದೆ ಮಂಗಲ ಅಂಗಡಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಗುರುವಾರ ಅವರ ನವದೆಹಲಿ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಬೆಳಗಾವಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಕೈಗಾರಿಕಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ
    ವಿಶೇಷ ಪ್ರಗತಿ ಹೊಂದುತ್ತ ಸಾಗಿದೆ. ಬೆಂಗಳೂರು ನಂತರ ಬೆಳಗಾವಿ ನಗರವನ್ನು ರಾಜ್ಯದ ಎರಡನೇ ರಾಜಧಾನಿ ಎಂದು ಕರೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ-ಬೆಂಗಳೂರು ಮಧ್ಯೆ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

    ಬೆಳಗಾವಿ ನೂತನ ರೈಲು ನಿಲ್ದಾಣದ ಉದ್ಘಾಟನೆ ಹಾಗೂ ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಬೆಳಗಾವಿ-ಬೆಂಗಳೂರು ನಡುವೆ ಸೆಮಿ ಹೈಸ್ಪೀಡ್ ವಂದೇ ಭಾರತ ಎಕ್ಸ್‌ಪ್ರೆಸ್ ಪ್ರಾರಂಭಿಸುವ ಮನವಿಯನ್ನು ಅವಶ್ಯವಾಗಿ ಪರಿಗಣಿಸುವುದಾಗಿ ತಿಳಿಸಿದರು. ಬೆಳಗಾವಿ ನೂತನ ರೈಲು ನಿಲ್ದಾಣದ ಉದ್ಘಾಟನೆ ಹಾಗೂ ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗದ ಶಂಕುಸ್ಥಾಪನೆ ಕಾರ್ಯಕ್ರಮ ಬಗ್ಗೆಯೂ ಶೀಘ್ರದಲ್ಲಿಯೇ ಪ್ರಧಾನಿ ಅವರನ್ನು ಭೇಟಿ ಮಾಡಿ ಸಮಾಲೋಚಿಸುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts