More

    ಬೆಳಗಾವಿ ರಾಜಕಾರಣಕ್ಕೆ ‘ಗಡಿ’ ಬಿಸಿ!

    ಬೆಳಗಾವಿ: ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಜನಪ್ರತಿನಿಧಿಗಳಿಗೆ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಪರಿಣಾಮ ಗಡಿ ವಿವಾದ ಕುರಿತು ಕಾಂಗ್ರೆಸ್-ಬಿಜೆಪಿ ಮುಖಂಡರು, ಶಾಸಕರು ಧ್ವನಿ ಎತ್ತದೆ ಮೌನಕ್ಕೆ ಶರಣಾಗಿದ್ದಾರೆ.

    ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯು ಅಧಿವೇಶನ, ರಾಜ್ಯೋತ್ಸವ ಹಾಗೂ ಚುನಾವಣೆ ಸಂದರ್ಭದಲ್ಲಿ ಗಡಿಭಾಗದಲ್ಲಿ ಭಾಷೆ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಆದರೆ, ಜಿಲ್ಲೆಯ ಜನಪ್ರತಿನಿಧಿಗಳು ತಕ್ಕ ಪ್ರತ್ಯುತ್ತರ ನೀಡುತ್ತಿಲ್ಲ. ಮತಬ್ಯಾಂಕ್‌ಗಾಗಿ ಮರಾಠಿ ಭಾಷಿಕರನ್ನು ಓಲೈಸಿಕೊಂಡು ಬರುವ ಕೆಲಸ ಮಾಡುತ್ತಿದೆ. ಇದು ಕನ್ನಡಿಗರನ್ನು ಮತ್ತು ಹೋರಾಟಗಾರರನ್ನು ಕೆರಳುವಂತೆ ಮಾಡಿದೆ.

    ಗಡಿ ಜಿಲ್ಲೆ ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಳಗಾವಿ ದಕ್ಷಿಣ, ಉತ್ತರ, ಗ್ರಾಮೀಣ, ಖಾನಾಪುರ, ಕಾಗವಾಡ, ನಿಪ್ಪಾಣಿ ವಿಧಾನಸಭಾ ಕ್ಷೇತ್ರಗಳಲ್ಲಿ ಮರಾಠಿಗರ ಪ್ರಾಬಲ್ಯವಿದೆ. ಹಾಗಾಗಿಯೇ ಈ ಕ್ಷೇತ್ರಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ದಶಕಗಳಿಂದ ಭಾಷಾ ವಿವಿದ ಜೀವಂತವಾಗಿಟ್ಟುಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿನ ಜನಪ್ರತಿನಿಧಿಗಳು ಎರಡು ಭಾಷಿಕರ ನಡುವೆ ಅಂತರ ಕಾಯ್ದುಕೊಂಡು ಗೆಲುವು ಸಾಧಿಸಿಕೊಂಡು ಬರುತ್ತಿದ್ದಾರೆ. ಅಲ್ಲದೆ, ಕಳೆದ ಹಲವು ದಶಕಗಳಿಂದ ಬೆಳಗಾವಿ ಜಲ್ಲೆಯ ರಾಜಕಾರಣಿಗಳು ನೆಲ, ಜಲ, ಭಾಷೆಯ ವಿಷಯದಲ್ಲಿ ಮರಾಠಿ ಭಾಷಿಕರು ಕುರಿತು ಮೃದು ಧೋರಣೆ ಇಟ್ಟುಕೊಂಡು ಬಂದಿದ್ದಾರೆ.

    2018ರ ವಿಧಾನಸಭೆ ಚುನಾವಣೆಯಲ್ಲಿ ಎಂಇಎಸ್ ಬೆಂಬಲಿತ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸಿದರು. ಎಂಇಎಸ್ ತನ್ನ ಅಸ್ತಿತ್ವನ್ನು ಕಳೆದುಕೊಳ್ಳುವುದರ ಜತೆಗೆ ಗಡಿ ವಿವಾದಲ್ಲಿ ಮೌನ ವಹಿಸಿತು. ಸುಪ್ರೀಂ ಕೋರ್ಟ್ ಗಡಿ ವಿವಾದದ ವಿಚಾರಣೆಯನ್ನು ನ.23ರಂದು ಕೈಗೆತ್ತಿಕೊಳ್ಳುವುದಾಗಿ ಘೋಷಣೆ ಮಾಡಿದ ಬಳಿಕ ಎಂಇಎಸ್ ತನ್ನ ಉಪಟಳ ಆರಂಭಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts