More

    ಬೆಳೆವಿಮೆ ತಾರತಮ್ಯ ಸರಿಪಡಿಸಿ

    ಚಿತ್ರದುರ್ಗ: ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಆಗಿರುವ ತಾರತಮ್ಯ ಸೇರಿ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
    2023 ಮತ್ತು 2024ರ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಆಗಿರುವ ತಾರತಮ್ಯಗಳನ್ನು ಸರಿಪಡಿಸಿ ಎಲ್ಲ ರೈತರಿಗೂ ಪಾವತಿಸಬೇಕು. ವಿಮಾ ಕಂತು ಪಾವತಿಸದ ರೈತರಿಗೆ ಬೆಳೆನಷ್ಟ ಪರಿಹಾರ ಭರಿಸಬೇಕು ಎಂದು ಆಗ್ರಹಿಸಿದರು.
    ಬ್ಯಾಂಕ್‌ಗಳಲ್ಲಿ ವಿಮೆ ಮತ್ತು ಬೆಳೆ ನಷ್ಟ ಪರಿಹಾರ, ಪಿಎಂ ಕಿಸಾನ್ ವೃದ್ಧಾಪ್ಯ, ಅಂಗವಿಕಲರ ವೇತನ ಇತ್ಯಾದಿ ಪರಿಹಾರ, ಪಿಂಚಣಿ ಮೊತ್ತಗಳನ್ನು ಬ್ಯಾಂಕ್‌ಗಳ ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಎಂದು ಸೂಚಿಸಬೇಕು ಎಂದು ತಿಳಿಸಿದರು.
    ತೋಟಗಾರಿಕೆ ಎಲ್ಲ ಬೆಳೆಗಳಿಗೂ ನಷ್ಟ ಪರಿಹಾರ ವಿತರಿಸಬೇಕು. ಆಕ್ರಮ-ಸಕ್ರಮದಡಿ ನೋಂದಾಯಿಸಿರುವ ರೈತರಿಗೆ ಕೂಡಲೇ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ಆಕ್ರಮ-ಸಕ್ರಮದಡಿ ಹೊಸ ನೋಂದಣಿಗೆ ಅವಕಾಶ ಮಾಡಿಕೊಡಬೇಕು ಎಂದರು.
    2022-23ನೇ ಸಾಲಿನಲ್ಲಿ ಬೆಳೆ ಪರಿಹಾರ ವಿತರಣೆಯಲ್ಲಿ ಆಗಿರುವ ಅವ್ಯವಹಾರದ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ನೊಂದ ರೈತರಿಗೆ ಪರಿಹಾರ ವಿತರಿಸಬೇಕು. ಭದ್ರಾ ಮೇಲ್ದಂಡೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
    ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.15ರಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ರೈತಸಂಘದ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ತಹಸೀಲ್ದಾರ್ ಸಂತೋಷ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
    ರಾಜ್ಯ ರೈತ ಸಂಘದ ಕಾರ‌್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ, ಮುಖಂಡರಾದ ಬಸವರಾಜಪ್ಪ, ಸತೀಶ್, ಚಂದ್ರಮೌಳಿ, ಕೆ.ಟಿ.ತಿಪ್ಪೇಸ್ವಾಮಿ, ಸಿದ್ದರಾಮಣ್ಣ, ಮಲ್ಲಿಕಾರ್ಜುನ್, ಮಂಜುನಾಥ್ ಮುದ್ದಾಪುರ, ನಾಗರಾಜ್ ರೆಡ್ಡಿ, ರವಿಕುಮಾರ್, ಶಿವಕುಮಾರ್, ರಂಗಸ್ವಾಮಿ, ಪ್ರಸನ್ನ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts