More

    ಬೆಳೆಸಾಲ ಮನ್ನಾ ಮಾಡಿ

    ನವಲಗುಂದ: 2019-20ನೇ ಸಾಲಿನಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ರೈತರಿಗೆ ಬೆಳೆನಷ್ಟ ಪರಿಹಾರ ನೀಡಬೇಕು. ರೈತರ ಖಾತೆಯ 2 ಲಕ್ಷ ರೂ. ಬೆಳೆಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ನರಗುಂದ ರೈತ ಹೋರಾಟ ವೇದಿಕೆ ಹಾಗೂ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಸಮ್ಮುಖದಲ್ಲಿ ಸಂಘಟನೆ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

    ರೈತ ಸೇನಾ ಕರ್ನಾಟಕ ಸಂಘಟನೆ ಅಧ್ಯಕ್ಷ ವಿರೇಶ ಸೊಬರದಮಠ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಹತ್ತಿ, ಮೆಕ್ಕೆಜೋಳ, ಹೆಸರು, ಶೇಂಗಾ, ಉಳ್ಳಾಗಡ್ಡಿ, ಮೆಣಸಿನಕಾಯಿ ಬೆಳೆಗಳು ಹಾನಿಯಾಗಿವೆ. ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಪ್ರತಿ ಹೇಕ್ಟೆರ್​ಗೆ 35 ಸಾವಿರ ರೂ. ಪರಿಹಾರ ನೀಡಬೇಕು ಆಗ್ರಹಿಸಿದರು.

    ಸಂಘಟನೆ ಪದಾಧಿಕಾರಿಗಳಾದ ಅಂದಾನಗೌಡ ಪಾಟೀಲ, ವೀರಬಸಪ್ಪ ಹೂಗಾರ, ಫಕೀರಪ್ಪ ಜೂಗಣ್ಣವರ, ಮಲ್ಲಣ್ಣ ಅಲೇಕಾರ, ಗುರು ರಾಯನಗೌಡ್ರ, ಸಿದ್ಧಲಿಂಗೇಶ ವರನಗೌಡಪಾಟೀಲ, ಕಿರಣ ಪಾಟೀಲ, ಪ್ರಶಾಂತ ದುಂಡಿಗೌಡ್ರ, ಹನುಮಂತ ಮಡಿವಾಳರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts