More

    ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

    ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯ ಹವಾಮಾನ ಆಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಲು ನಿಗದಿಪಡಿಸಿದ ದಿನವನ್ನು ರೈತರ ಹಿತದೃಷ್ಟಿಯಿಂದ ಜು.31ರವರೆಗೆ ವಿಸ್ತರಿಸಲು ಕೋರಿದ್ದು, ಸರ್ಕಾರವು ಅವಧಿ ವಿಸ್ತರಿಸುವ ಭರವಸೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

    ಅಡಕೆ, ಶುಂಠಿ, ಕಾಳುಮೆಣಸು ಮುಂತಾದ ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ವಿಮೆ ಮಾಡಿಸಲು ಜೂ.30 ಹಾಗೂ ಮಾವು ಬೆಳೆಗೆ ಜು.31ರವರೆಗೆ ನೋಂದಾಯಿಸಿಕೊಳ್ಳಲು ದಿನಾಂಕ ನಿಗದಿಪಡಿಸಿ ಸರ್ಕಾರ ಜೂ.25ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ ಅವಧಿ ವಿಸ್ತರಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪರಿಷ್ಕೃತ ಆದೇಶ ಶೀಘ್ರವೇ ಹೊರಬೀಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ರೈತರು ಬೆಳೆವಿಮೆಗೆ ಹೆಸರು ನೋಂದಾಯಿಸಲು 2 ದಿನಗಳ ಅತ್ಯಂತ ಕಡಿಮೆ ಕಾಲಾವಕಾಶ ಇರುವುದರಿಂದ ಹಾಗೂ ಮಲೆನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದರಿಂದ ಸಾಕಷ್ಟು ಸಂಖ್ಯೆಯ ರೈತರಿಗೆ ಹೆಸರು ನೋಂದಾಯಿಸಲು ಸಾಧ್ಯವಾಗುವುದಿಲ್ಲ. ಈ ಸಂಬಂಧ ರೈತರ ಅನನುಕೂಲಗಳನ್ನು ಸಿಎಂ ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ.

    ಹಾಗಾಗಿ ಮಾವು ಸೇರಿ ಎಲ್ಲ ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗದೆ ಪರಿಷ್ಕೃತ ದಿನಾಂಕದೊಳಗೆ ಬೆಳೆ ವಿಮೆಯ ಕಂತು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts