More

    ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ

    ರಾಣೆಬೆನ್ನೂರ: ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯ ಹಾಗೂ ಸರ್ಕಾರದ ವಿರುದ್ಧ ಧ್ವನಿ ಎತ್ತುವ ರೈತ ಹೋರಾಟಗಾರರ ಮೇಲೆ ಬಿಜೆಪಿ ಸರ್ಕಾರ ವಿನಾಕಾರಣ ಪೊಲೀಸ್ ಪ್ರಕರಣ ದಾಖಲಿಸುತ್ತಿದೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ಕೆಇಬಿ ವಿನಾಯಕ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಬಸ್ ನಿಲ್ದಾಣ ಸರ್ಕಲ್, ಸ್ಟೇಷನ್ ರಸ್ತೆ, ಪೋಸ್ಟ್ ಸರ್ಕಲ್, ಎಂ.ಜಿ. ರಸ್ತೆ, ದುರ್ಗಾ ಸರ್ಕಲ್, ಕುರುಬಗೇರಿ ಕ್ರಾಸ್, ಹಳೇ ಪಿ.ಬಿ. ರಸ್ತೆ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ಬಂದು ತಲುಪಿತು. ಅಲ್ಲಿ ಧರಣಿ ನಡೆಸಿ ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

    ನೇತೃತ್ವ ವಹಿಸಿದ್ದ ರವೀಂದ್ರಗೌಡ ಪಾಟೀಲ ಮಾತನಾಡಿ, ಬೆಳೆ ವಿಮೆ ಪರಿಹಾರದಲ್ಲಿ 3 ವರ್ಷಗಳಿಂದ ತಾರತಮ್ಯವಾಗಿದ್ದು, ಸರ್ಕಾರ ಕೂಡಲೆ ತನಿಖೆ ನಡೆಸುವ ಮೂಲಕ ಅನ್ಯಾಯವಾಗಿರುವ ರೈತರಿಗೆ ಪರಿಹಾರ ನೀಡಬೇಕು. ಓಟಿಎಸ್ ಯೋಜನೆ ಜಾರಿಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೆ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts