More

    ಬೆಳೆ ಸಮೀಕ್ಷೆ ಕಾರ್ಯ ಶೀಘ್ರ ಪೂರ್ಣವಾಗಲಿ

    ಗದಗ: ಬೆಳೆ ಸಮೀಕ್ಷೆ ಕಾರ್ಯದಿಂದ ಜಿಲ್ಲೆಯ ಯಾವೊಬ್ಬ ರೈತರು ವಂಚಿತರಾಗಬಾರದು. ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಅಲ್ಲದೆ, ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿದರು.

    ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.

    ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ಮನೆ ಹಾಗೂ ಜಾನುವಾರುಗಳ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕು ಎಂದರು.

    ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ಜಿಲ್ಲೆಯ ರೈತರಿಂದ ಖರೀದಿಸಲು ಕೇಂದ್ರಗಳನ್ನು ತೆರೆಯಲಾಗಿದೆ. ಆಯಾ ತಾಲೂಕಿನ ತಹಸೀಲ್ದಾರರು ಖರೀದಿ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು. ರೈತರಿಗೆ ಖರೀದಿ ಕೇಂದ್ರಗಳ ಮಾಹಿತಿ ಒದಗಿಸಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

    ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ತರಿಗೆ ಕಳೆದ ವರ್ಷ ಮಂಜೂರಾಗಿರುವ ಮನೆ ನಿರ್ವಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಿರ್ಮಾಣ ಹಂತದಲ್ಲಿರುವ ಮನೆಗಳು ಯಾವ ಹಂತದಲ್ಲಿವೆ ಎಂದು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಮನೆ ಮಂಜೂರಾಗಿದ್ದರೂ ಮನೆ ನಿರ್ವಿುಸಿಕೊಳ್ಳದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಜಿಪಂ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್. ಎನ್. ರುದ್ರೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ ಬಸರಿಗಿಡದ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts