More

    ಬೆಳೆ ಸಮೀಕ್ಷೆ ಕಾರ್ಯ ಸೆ.1 ರಿಂದ ಚಾಲನೆ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾಹಿತಿ


    ವಿಜಯವಾಣಿ ಸುದ್ದಿಜಾಲ ಮಡಿಕೇರಿ
    ಕೊಡಗು ಜಿಲ್ಲೆಯ ಒಟ್ಟು 525 ಹಳ್ಳಿಗಳಲ್ಲಿ 2,90,972 ಸರ್ವೇ ನಂಬರ್‌ಗಳಿದ್ದು, ಈ ಸರ್ವೇ ನಂಬರ್‌ಗಳ ಪೈಕಿ 2,60,610 ಬೆಳೆ ಸಮೀಕ್ಷೆ ಕೈಗೊಳ್ಳಬೇಕಾಗಿದೆ. 2022-23ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲೆಯಾದ್ಯಂತ ಸೆ.1 ರಿಂದ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
    ಸರ್ಕಾರದ ಆದೇಶದ ಅನುಸಾರ ಈ ಬಾರಿ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ‘ಊಚ್ಟಞಛ್ಟಿ ಇ್ಟಟ ಖ್ಠ್ಟಛಿ ಅ202223‘ ಎಂಬ ಹೆಸರಿನ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಮೊಬೈಲ್ ಆ್ಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 353 ಖಾಸಗಿ ಸಿಬ್ಬಂದಿ ನೇಮಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆರ್ಥಿಕ ವರ್ಷ ಹಾಗೂ ಋತು ದಾಖಲಿಸಬೇಕು. ರೈತರ ಹೆಸರು, ಮೊಬೈಲ್ ಸಂಖ್ಯೆ ನಮೂದಿಸಿ ರೈತರು ತಮ್ಮ ವಿವರಗಳನ್ನು ನೋಂದಣಿ ಮಾಡಿಕೊಳ್ಳಬೇಕು. ರೈತರ ಆಧಾರ್ ಕಾರ್ಡ್ ಸ್ಕ್ಯಾನ್ ಮಾಡುವುದು, ಸ್ಕ್ಯಾನ್ ಆಗದೇ ಇದ್ದಲ್ಲಿ ನಿಗದಿತ ನಮೂನೆಯಂತೆ ವಿವರ ದಾಖಲಿಸಬೇಕು. ಮೊಬೈಲ್ ಆ್ಯಪ್‌ನಲ್ಲಿ ಮೊದಲು ಮಾಸ್ಟರ್ ವಿವರ, ಪಹಣಿ ವಿವರ ಮತ್ತು ಮಾಲೀಕರ ವಿವರ, ಪಾಲಿಗಾನ್ ಹಾಗೂ ಜಿಐಎಸ್. ಮ್ಯಾಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ ತಮ್ಮ ಜಮೀನಿನ ಸರ್ವೇ ನಂಬರ್‌ಗಳನ್ನು ಆ್ಯಪ್‌ಗೆ ಸೇರಿಸಿಕೊಳ್ಳಬೇಕು ಹಾಗೂ ಹಿಸ್ಸಾ ಇದ್ದರೆ ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿವರಿಸಿದರು.
    ಈ ಸಂದರ್ಭ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಬನಾ ಎಂ.ಶೇಖ್ ಮಾತನಾಡಿ, ಹೆಚ್ಚಿನ ಮಾಹಿತಿಗೆ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ 7848914915, ತಮ್ಮ ಗ್ರಾಮದ ಖಾಸಗಿ ನಿವಾಸಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು.
    ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ತಹಸೀಲ್ದಾರ್ ಮಹೇಶ್, ಗೋವಿಂದರಾಜು, ಅರ್ಚನಾ, ಪ್ರಶಾಂತ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗೌರಿ, ಭೂದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts