More

    ಬೆಳೆ ಸಮೀಕ್ಷೆ ಸಮರ್ಪಕ ನಿರ್ವಹಿಸಿ

    ಯಾದಗಿರಿ: ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗ ಮತ್ತು ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಡಿಸಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಪ್ರಸಕ್ತ ಸಾಲಿನ ಕೃಷಿ ಅಂಕಿ-ಅಂಶಗಳ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ೨೨೬೨ ಪ್ರಯೋಗಗಳಿದ್ದು, ಈಗಾಗಲೇ ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.

    ಬೆಳೆ ಕಟಾವು ಪ್ರಯೋಗ(experiment) ಇಳುವರಿ ಆಧರಿಸಿ ವಿಮಾ ಕಂಪನಿಗಳು ವಿಮೆ ಮೊತ್ತ ನಿರ್ಧರಿಸುತ್ತಿದ್ದು, ಹಂಚಿಕೆಯಾದ ಮೂಲ ಕಾರ್ಯಕರ್ತರು ಪ್ರತಿ ಪ್ರಯೋಗಕ್ಕೆ ೧+೪ ಸರ್ವೇ ನಂಬರ್ ಸೇರಿಸಿ ಯಾವುದೇ ಪ್ರಯೋಗ ವ್ಯರ್ಥವಾಗದಂತೆ ಹಾಗೂ ಕಡ್ಡಾಯವಾಗಿ ವಿಮಾ ಕಂಪನಿ ಪ್ರತಿನಿಧಿಗಳು, ಮೂಲ ಕರ‍್ಯಕರ್ತರು ಮತ್ತು ರೈತರು ಹಾಜರಿದ್ದ ಭಾವಚಿತ್ರವಿರುವಂತೆ ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.

    ಸಾಂಖ್ಯಿಕ ನಿರ್ದೇಶನಾಲಯದ ಅಪರ ನಿರ್ದೇಶಕ ಬಸವರಾಜ ಮಾತನಾಡಿ, ಮುಂಗಾರಿನ ಬೆಳೆ ಸಮೀಕ್ಷೆ ಕೈಗೊಳ್ಳಲು ಖಾಸಗಿಯವರಿಗೆ ಸೂಕ್ತ ತರಬೇತಿ ನೀಡಲಾಗುತ್ತಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಸಮೀಕ್ಷೆಯಲ್ಲಿ ಬಿಟ್ಟು ಹೊಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.

    ಸಮನ್ವಯ ಸಮಿತಿ ಸದಸ್ಯ ಕಾರ್ಯದರ್ಶಿ ಯುಸೂಫ್ ಅಲಿ, ಅಪರ ಡಿಸಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts