More

    ಬೆಳೆ ಹಾನಿ ಪರಿಹಾರ ನೀಡಿ

    ಜೇವರ್ಗಿ: ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಬೆಳೆ ಹಾನಿ ಜತೆಗೆ ರಸ್ತೆಗಳು ಕೊಚ್ಚಿ ಹೋಗಿವೆ. ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಲಾಖೆಯ 43.44 ಕೋಟಿ ರೂ.ಮತ್ತು ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಬರುವ 13.50 ಕೋಟಿ ರೂ.ಮೊತ್ತದ ರಸ್ತೆಗಳು ಹಾನಿಗೀಡಾಗಿವೆ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.
    ಮಂಗಳವಾರ ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಅಡಿಯಲ್ಲಿ ಬರುವ ಬಾಳೆ, ಮೆಣಸಿನಕಾಯಿ, ನುಗ್ಗೆಕಾಯಿ, ಈರುಳ್ಳಿ, ಬಳ್ಳೊಳಿ ಬೆಳೆಗಳಿಗೆ ಮಳೆ ನೀರು ನುಗ್ಗಿ ಹಾನಿಗೀಡಾಗಿವೆ. ಸುಮಾರು 100 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಪ್ರಮುಖ ಬೆಳೆಗಳಾದ ತೊಗರಿ, ಹತ್ತಿ, ಮೆಕ್ಕೆಜೋಳ, ಹೆಸರು ಮತ್ತು ಇತರೆ ಬೆಳೆಗಳು ಸೇರಿ ಒಟ್ಟು 21,325ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆಗಳು ಹಾನಿಗೀಡಾಗಿವೆ. ಹಾನಿಗೀಡಾದ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಜಿಲ್ಲಾಧಿಕಾರಿ ಸಮರ್ಪಕವಾಗಿ ಅನುದಾನ ಬಿಡುಗಡೆಗೊಳಿಸಬೇಕು. ಬೆಳೆ ಮತ್ತು ಮನೆ ಹಾನಿಗೀಡಾದವರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದರು.
    ಜೇವಗರ್ಿ ಮತ್ತು ಯಡ್ರಾಮಿ ತಾಲೂಕಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಯಾದ ಕುರಿತು ಸಮೀಕ್ಷೆ ಕಾರ್ಯ ಪೂರ್ಣಗೊಂಡ ನಂತರ ಅಂಕಿ ಅಂಶಗಳ ಸಮೇತ ಜಿಲ್ಲಾಧಿಕಾರಿಗೆ ಹೆಚ್ಚಿನ ಪರಿಹಾರ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts