More

    ಬೆಳೆ ಹಾನಿ ವರದಿ ಶೀಘ್ರ ನೀಡಿ

    ನವಲಗುಂದ: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಹಾನಿಗೀಡಾದ ಬೆಳೆಗಳ ವರದಿಯನ್ನು ಕೂಡಲೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರು ಸೂಚಿಸಿದರು.

    ಬೆಳೆ ಹಾನಿ, ಬೆಳೆ ಸಮೀಕ್ಷೆ, ಯೂರಿಯಾ ಗೊಬ್ಬರ ಸಮರ್ಪಕ ಪೂರೈಕೆ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತಾಪಂ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ತುರ್ತು ಸಭೆಯಲ್ಲಿ ಅವರು ಮಾತನಾಡಿದರು. ರೈತರಿಗೆ ಬೆಳೆ ಸಮೀಕ್ಷೆ ಆಪ್ ಅಳವಡಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಬೇಕು. ಯೂರಿಯಾ ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

    ಬೆಳೆ ಹಾಗೂ ಮನೆ ಹಾನಿ ಬಗ್ಗೆ ಕೃಷಿ, ಕಂದಾಯ, ಗ್ರಾ.ಪಂ. ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜಂಟಿಯಾಗಿ ಸರ್ವೆ ನಡೆಸಿ ವರದಿ ತಯಾರಿಸಬೇಕು ಎಂದರು.

    ಮಲಪ್ರಭಾ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಕಾಲುವೆಗಳು ತುಂಬಿ ಹರಿಯುತ್ತಿವೆ. ಇದರಿಂದ ಅಳಗವಾಡಿ, ಅಮರಗೋಳ, ಮೊರಬ, ತಲೆಮೊರಬ ಗ್ರಾಮಗಳ ಹೊಲಕ್ಕೆ ನೀರು ನುಗ್ಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಬೆಳೆಗಳಿಗೆ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

    ಬಿಸಿಯೂಟ ನೌಕಕರ ಮನವಿ
    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ ವೇಳೆ ಬಿಸಿಯೂಟ ನೌಕರರು ಶಾಸಕರಿಗೆ ಮನವಿ ಸಲ್ಲಿಸಿದರು. ತಹಸೀಲ್ದಾರ್ ನವೀನ ಹುಲ್ಲೂರ, ತಾ.ಪಂ. ಇಒ ಕೆ.ಬಿ. ಚಾಟೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts