More

    ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರ

    ಹಿರೇಕೆರೂರ: ವಿವಿಧ ರೈತ, ಕನ್ನಡ ಪರ ಸಂಘಟನೆಗಳು ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ತಹಸೀಲ್ದಾರ್ ರಿಯಾಜುದ್ದೀನ್ ಬಾಗವಾನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ಜಾರಿಗೊಳಿಸುವ ಮೂಲಕ ರೈತರ ಹಿತ ಬಲಿ ಕೊಡಲಾಗಿದೆ. ಕಳೆದ ವರ್ಷ ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಇನ್ನೂ ಪೂರ್ಣ ಪ್ರಮಾಣದ ಪರಿಹಾರ ಕೊಟ್ಟಿಲ್ಲ. ಪರಿಹಾರ ವಿತರಣೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ರೈತರಿಗೆ ಅನ್ಯಾಯವೆಸಗಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆಗೊಳಪಡಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು. ರೈತ ಸಂಘದ ತಾಲೂಕಾಧ್ಯಕ್ಷ ಪ್ರಭುಗೌಡ ಪ್ಯಾಟಿ, ಜಿಲ್ಲಾ ಸಂಚಾಲಕ ಗಂಗನಗೌಡ ಮುದಿಗೌಡ್ರ, ಹನುಮಂತಪ್ಪ ಜೋಗೇರ, ದಿಗ್ವಿಜಯ ಹತ್ತಿ, ಶಂಭು ಮುತ್ತಿಗಿ, ಮಂಜು ಆರೀಕಟ್ಟಿ, ಕಾಮಾಕ್ಷಿ ರೇವಣಕರ್, ನವೀನ ಹುಲ್ಲತ್ತಿ, ನಾಗರಾಜ ಮಳೂರು, ಮಾರುತಿ ಮಡಿವಾಳರ, ಸಲೀಂ ಕಣವಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts