More

    ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗದಿರಲಿ

    ಶಿಕಾರಿಪುರ: ಬೇಸಿಗೆಯಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಗ್ಗೆ ಗಮನಹರಿಸಬೇಕು. ಪೈಪ್‍ಲೈನ್, ವಾಟರ್ ಟ್ಯಾಂಕ್‍ಗಳ ದುರಸ್ತಿ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ಅ„ಕಾರಿಗಳಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸೂಚಿಸಿದರು.
    ತಾಪಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿವಿಧ ನಿಗಮಗಳಿಂದ -Àಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ತಾಲೂಕಿನ ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಮತ್ತು ಅ„ಕಾರಿಗಳ ಸಭೆಯಲ್ಲಿ ಮಾತನಾಡಿ, ಮಳೆಗಾಲದ ತನಕ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಬೇಕು. ಇದಕ್ಕೆ ವಿದ್ಯುತ್ ಇಲಾಖೆ ಅ„ಕಾರಿಗಳೂ ಸಹಕರಿಸಬೇಕು ಎಂದರು.
    ಅನುದಾನದ ಕೊರತೆಯಿದ್ದರೆ ಈ ಬಗ್ಗೆ ಜಿ¯್ಲÁ„ಕಾರಿ ಜತೆಗೆ ಮಾತನಾಡುತ್ತೇನೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಿಸಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮೊದಲೇ ಎಚ್ಚರಿಕೆ ವಹಿಸುವ ಅಗತ್ಯವಿದೆ. ಕಳೆದ ವರ್ಷ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತೋ, ಆ ಗ್ರಾಪಂನ ಪಿಡಿಒ, ಅಧ್ಯಕ್ಷ ಮತ್ತು ಸದಸ್ಯರು ಗಂಭೀರವಾಗಿ ಪರಿಗಣಿಸಬೇಕು. ಪೂರಕವಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
    ಬೇಸಿಗೆಯಲ್ಲಿ ಸಹಜವಾಗಿ ಅಂತರ್ಜಲ ಮಟ್ಟ ಕುಸಿತದಿಂದ ಬೋರ್‍ವೆಲïಗಳಲ್ಲಿ ನೀರಿನ ಹರಿವು ಕಡಿಮೆಯಾಗುತ್ತದೆ. ಅಂತಹ ಸಮಯದಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿ ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು. ಬಯಲು ನಾಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹೆಚ್ಚಿನ ನೀರಿನ ಸಮಸ್ಯೆ ಕಾಡಬಹುದು. ತಾಲೂಕು ಆಡಳಿತ ಈ ಬಗ್ಗೆ ಅಂತಹ ಪ್ರದೇಶಗಳನ್ನು ಗುರುತಿಸಬೇಕು. ಯಾವ ಕಾರಣಕ್ಕೂ ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗಬಾರದು. ಕೂಡಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದರು.
    ಕುಡಿಯುವ ನೀರಿಗೆ ಸಂಬಂ„ಸಿದ ಕಾಮಗಾರಿಗಳು ಚಾಲನೆಯಲ್ಲಿದ್ದರೆ ಶೀಘ್ರವಾಗಿ ಪೂರ್ಣಗೊಳಿಸಿ. ಹಣಕಾಸಿನ ಕೊರತೆ ಅಥವಾ ಇನ್ಯಾವುದೋ ಕಾರಣದಿಂದ ಕಾಮಗಾರಿ ನಿಂತಿದ್ದರೆ ಅದಕ್ಕೆ ಚಾಲನೆ ನೀಡಿ. ಈ ಬಾರಿ ಬಿಸಿಲಿನ ಧಗೆ ಜÁಸ್ತಿ ಇದೆ. ಸಣ್ಣ ಪುಟ್ಟ ಕಾಯಿಲೆಗಳು ಜನರನ್ನು ಹೈರಾಣಾಗಿ ಮಾಡುತ್ತವೆ ಎಚ್ಚರ ವಹಿಸಿ ಎಂದು ಹೇಳಿದರು.
    ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೊಳಗಿ ರೇವಣಪ್ಪ, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುಸಿಂಗ್, ಇಒ ಪರಮೇಶ್, ವಿವಿಧ ಇಲಾಖೆಗಳ ಅ„ಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts