More

    ಬೇಸಿಗೆಯಲ್ಲಿ ಮಂಗನ ಕಾಯಿಲೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಹರತಾಳು ಹಾಲಪ್ಪ

    ಸಾಗರ: ತಾಲೂಕಿನಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿಲ್ಲ. ಹೊಸನಗರ ತಾಲೂಕಿನಲ್ಲಿ ಒಂದು ಮಾತ್ರ ದಾಖಲಾಗಿದೆ. ಈ ಬಗ್ಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಮಂಗನ ಕಾಯಿಲೆಯ ಬಗ್ಗೆ ಅಜಾಗರೂಕತೆ ಸಲ್ಲದು. ಅಧಿಕಾರಿಗಳು ಎಚ್ಚರಿಕೆಯಿಂದಿರಬೇಕು ಎಂದು ಶಾಸಕ ಹರತಾಳು ಹಾಲಪ್ಪ ತಾಕೀತು ಮಾಡಿದರು.
    ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಕೆಎಫ್‌ಡಿ ಸೇರಿದಂತೆ ವಿವಿಧ ಯೋಜನೆ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿ, ಕೆಎಫ್‌ಡಿ ಪ್ರಕರಣ ಸಂಪೂರ್ಣ ನಿಯಂತ್ರಣದಲ್ಲಿದೆ. ಬೇಸಿಗೆ ಸಮೀಪಿಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ, ಗ್ರಾಪಂ, ಪಶುಪಾಲನಾ ಇಲಾಖೆ, ಅರಣ್ಯ ಇಲಾಖೆ ಸಮನ್ವಯತೆ ಸಾಧಿಸಲು ತಿಳಿಸಲಾಗಿದೆ ಎಂದರು.
    ಒಮ್ಮೆ ಪ್ರಕರಣಗಳು ಹೆಚ್ಚಾಗಿ ಸಾವು- ನೋವುಗಳು ಸಂಭವಿಸಿದ್ದು ಎಲ್ಲರಿಗೂ ತಿಳಿದಿದೆ. ಕಾಯಿಲೆಗೆ ಸಂಬಂಧಿಸಿದ ಮುಂಜಾಗ್ರತಾ ಲಸಿಕೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಈಗಾಗಲೇ ವೈದ್ಯರು, ಸಿಬ್ಬಂದಿ ಮಂಗನ ಕಾಯಿಲೆ ಗುರುತಿಸಲಾಗಿರುವ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.
    ಅಂಬಾರಗುಡ್ಡ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿದ್ದು ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ಜನರಿಗೆ ಬಗರ್‌ಹುಕುಂ ಹಕ್ಕುಪತ್ರ ಕೊಡಲು ಅವಕಾಶ ಇದ್ದು ಅದನ್ನು ಮಾಡಲಾಗುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts