More

    ಬೇಸಿಗೆ ಶಿಬಿರದ ಮಕ್ಕಳಿಂದ ಮತದಾನ ಜಾಗೃತಿ ಕಾರ್ಯಕ್ರಮ

    ಗದಗ: ನಗರದ ಶತಮಾನೋತ್ಸವ ಪೂರೈಸಿದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯ ಬೇಸಿಗೆ ಶಿಬಿರದ ಮಕ್ಕಳಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶಾಲೆಯ ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀ ಪ್ರತೀಕ. ಎಸ್. ಹುಯಿಲಗೋಳ ರವರು ಮಾತನಾಡಿ  ಇಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಅರ್ಹತೆ ಹೊಂದಿರುವ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತ ಸಂವಿಧಾನ ನಮಗೆ ನೀಡಿರುವ ಹಕ್ಕಾಗಿದೆ. ಅದನ್ನು ಉತ್ತಮ ಪ್ರತಿನಿಧಿಗಳ ಆಯ್ಕೆಗೆ ಬಳಸಬೇಕು. ಚುನಾವಣೆಯಲ್ಲಿ ಮತದಾನ ಮಾಡುವುದನ್ನು ಯಾರೂ ಮರೆಯಬಾರದು ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮದಿಂದ ನಾವೆಲ್ಲರೂ ಆಚರಿಸಬೇಕು ಎಂದು ಮತದಾರರಿಗೆ ಕರೆ ನೀಡಿದರು. 

    ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ಭಾರತ ಸಂವಿಧಾನದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು, ಚುನಾವಣೆ ಸಂದರ್ಭದಲ್ಲಿ ಉತ್ತಮ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಶಕ್ತಿ ಮತದಾರರಲ್ಲಿದೆ.  ಎಲ್ಲರೂ ಕಡ್ಡಾಯವಾಗಿ ನಿಮ್ಮ ನಿಮ್ಮ ಮತವನ್ನು ಚಲಾಯಿಸಿ, ನಿಮ್ಮ ಹಕ್ಕನ್ನು ಬಳಸಿಕೊಳ್ಳಿ ಎಂದರು. 

    ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿಯರಾದ ಕು. ಗಾಯತ್ರಿ ಅಸುಂಡಿ ರವರು ನನ್ನ ಮತ ನನ್ನ ಹಕ್ಕು, ನನ್ನ ಮತ ದೇಶಕ್ಕೆ ಹಿತ. ಮತದಾನ ಮಾಡಿದವನೇ ಹೀರೋ, ಚುನಾವಣೆಯ ಪರ್ವ ದೇಶದ ಗರ್ವ ಮುಂತಾದ ಮತದಾನದ ಜಾಗೃತಿ ಘೋಷಣೆಗಳನ್ನು ಮಕ್ಕಳಿಗೆ ಹೇಳಿಕೊಟ್ಟರು. ಶಿಕ್ಷಕಿಯರಾದ ಶ್ರೀಮತಿ ಸುಮಂಗಲಾ ಅಸಂಗಿ ಯವರು  ಮತದಾನ ಪದ್ಧತಿಯು  ಹೇಗೆ ನಡೆಯುತ್ತದೆ ಹಾಗೂ ಚುನಾವಣೆಗೆ ನಿಂತ ಅಭ್ಯರ್ಥಿಗಳು ಹೇಗೆ ಚುನಾಯಿತರಾಗುತ್ತಾರೆ ಎಂಬುದನ್ನು  ಅಣಕು ಮತಯಂತ್ರ ಪೆಟ್ಟಿಗೆ ಬಳಸಿ ಮಕ್ಕಳಿಗೆ ಸವಿಸ್ತಾರವಾಗಿ ಮತದಾನದ ಅರಿವನ್ನು ಮೂಡಿಸಿದರು. 

    ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿಯರಾದ ಶ್ರೀಮತಿ ರೇಣುಕಾ ವೆಂಕಟಾಪುರ, ಶ್ರೀಮತಿ ಎ. ಎಚ್. ಬಾಗಲಕೋಟಿ, ಬಿ. ಎಡ್. ಪ್ರಶಿಕ್ಷಣಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts