

ಮಂಗಳೂರು:- ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅತಿಥಿಯಾಗಿದ್ದರು.
ಸ್ಥಳೀಯ ಶಾಸಕರಾದ ಭರತ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷ ರಜನಿ ದಗ್ಗಣ್ಣ, ಕಾರ್ಯದರ್ಶಿ ಸಿ.ಎಚ್. ಮೋಹನ್, ಎಪಿಎಂಸಿ ಆಡಳಿತ ಮಂಡಳಿ ಸಮಿತಿಯ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.