More

    ಬೈಪಾಸ್ ಕಾಮಗಾರಿ ಮತ್ತೇ ಆರಂಭ

    ಬೆಳಗಾವಿ: ನಗರದ ಹೊರವಲಯದ ಮಚ್ಛೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ವಿರೋಧದ ಮಧ್ಯೆಯೂ ಪೊಲೀಸರ ಭದ್ರತೆಯಲ್ಲಿ ಮಂಗಳವಾರ ಆರಂಭಿಸಲಾಯಿತು.

    ಫಲವತ್ತಾದ ಭೂಮಿಯನ್ನು ಕೊಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ರೈತ ಪ್ರಕಾಶ ನಾಯ್ಕ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕಾಮಗಾರಿ ಸ್ಥಳದಿಂದ ಪ್ರತಿಭಟನಾನಿರತ ರೈತರನ್ನು ಪೊಲೀಸರು ಕರೆದೊಯ್ದರು. ಬಳಿಕ ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಆರಂಭವಾಯಿತು.

    ಮಚ್ಛೆಯಿಂದ-ಹಲಗಾವರೆಗೆ ಸುಮಾರು 9.5 ಕಿ.ಮೀ. ಬೈಪಾಸ್ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿತ್ತು. 2021ರ ನವೆಂಬರ್ 11ರಂದು ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿ ರೈತನ ಪುತ್ರ ಆಕಾಶ ಅನಗೋಳ್ಕರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರಿಂದ ರಸ್ತೆ ಕಾಮಗಾರಿ ಸ್ಥಗಿತಗೊಂಡಿತ್ತು. ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಶೇ. 90 ರೈತರಿಗೆ ಪರಿಹಾರ ನೀಡಲಾಗಿದೆ. ಸುಮಾರು 50 ರೈತರು ಪರಿಹಾರ ತೆಗೆದುಕೊಂಡಿದ್ದಿಲ್ಲ.

    ಹೈಕೋರ್ಟ್ ಗ್ರೀನ್ ಸಿಗ್ನಲ್: ಕಾಮಗಾರಿಗೆ ಅನುಮತಿ ಕೋರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೈಕೋರ್ಟ್ ಮೊರೆ ಹೋಗಿತ್ತು. ಕಾಮಗಾರಿ ನಿರ್ಮಿಸುವುದಕ್ಕೆ ಹೆದ್ದಾರಿ ಪ್ರಾಧಿಕಾರಕ್ಕೆ ಏ.24ರಂದು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದಿಂದ ಮಂಗಳವಾರ ಕಾಮಗಾರಿ ಆರಂಭಿಸಲಾಗಿತ್ತು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts