More

    ಬ್ಯಾಕೋಡು ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್

    ಬ್ಯಾಕೋಡು: ಸ್ಥಳೀಯರ ಬಹು ದಿನದ ಬೇಡಿಕೆಗೆ ಸ್ಪಂದಿಸಿರುವ ಶಾಸಕ ಹರತಾಳು ಹಾಲಪ್ಪ ಅವರು ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಸೇವೆ ದೊರೆಯುವಂತೆ ಮಾಡಿದ್ದಾರೆ. ಕರೂರು ಹೋಬಳಿಯ ಬ್ಯಾಕೋಡಿನಲ್ಲಿ ಇತ್ತೀಚೆಗೆ ನಡೆದ ಅಪಘಾತ ಪ್ರಕರಣಗಳಲ್ಲಿ ಸಕಾಲಕ್ಕೆ ಆ್ಯಂಬುಲೆನ್ಸ್ ದೊರೆಯದೆ ಗಾಯಾಳುಗಳಿಗೆ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕುದರೂರು, ಚನ್ನಗೊಂಡ, ಎಸ್.ಎಸ್.ಭೋಗ್ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ ಒದಗಿಸುವಂತೆ ಒತ್ತಾಯಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಮೋಹನ್ ಬ್ಯಾಕೋಡು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆ್ಯಂಬುಲೆನ್ಸ್ ಹಸ್ತಾಂತರಿಸಿದರು. ಈ ಬಗ್ಗೆ ವೇಳೆ ಅಗತ್ಯವಿರುವ ವೈದ್ಯರನ್ನು ಪೂರೈಸುವಂತೆ ಸ್ಥಳೀಯರು ಆಗ್ರಹ ಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts