More

    ಬ್ಯಾರೇಜ್ ನಿರ್ಮಾಣಕ್ಕೆ ಪ್ರಯತ್ನ


    ಯಾದಗಿರಿ: ಕಳೆದ ನಾಲ್ಕು ವರ್ಷಗಳಲ್ಲಿ ಯಾದಗಿರಿ ಮತಕ್ಷೇತ್ರದ ಗ್ರಾಮೀಣ ಭಾಗದಲ್ಲಿ ರೈತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದೇನೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ತಿಳಿಸಿದರು.

    ತಾಲೂಕಿನ ಠಾಣಾಗುಂದಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಭೀಮಾನದಿಗೆ ತೆರಳುವ ಹಳ್ಳಕ್ಕೆ 1.70 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಗ್ರಾಮದಲ್ಲಿನ ಭೀಮಾ ನದಿಗೆ ಬ್ಯಾರೇಜ್ ನಿಮರ್ಾಣ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

    ಈ ಯೋಜನೆ ಜಾರಿಯಾದರೆ ಈ ಭಾಗದ 30 ರಿಂದ 40 ಗ್ರಾಮಗಳಿಗೆ ನೀರಾವರಿ ಸೌಕರ್ಯ ಕಲ್ಪಿಸುವ ಜತೆಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುತ್ತದೆ. ಠಾಣಗುಂದಿ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಇದುವರೆಗೂ 7 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನೂ ಏನಾದರೂ ಸೌಲಭ್ಯವಿದ್ದರೆ ಹೇಳಿ ಅದನ್ನೂ ಮಾಡಲಾಗುವುದು ಎಂದು ಹೇಳಿದರು.

    ಈ ಭಾಗದ 7-8 ಗ್ರಾಮಗಳು ನಮ್ಮ ಸ್ವಂತ ಗ್ರಾಮಗಳಿದ್ದಂತೆ, ನಿಮ್ಮ ಯಾವುದೇ ಸಮಸ್ಯೆ ಇರಲಿ, ನೇರವಾಗಿ ನಮ್ಮ ಗಮನಕ್ಕೆ ತರಬಹುದು. ಅಗತ್ಯಕ್ಕೆ ಅನುಗುಣವಾಗಿ, ಕಾಮಗಾರಿ ಕೈಗೊಳ್ಳಲಾಗುವುದು, ಯಾವುದೇ ಕಾರಣಕ್ಕೂ ನಿಮ್ಮ, ನಿಮ್ಮಲ್ಲಿ ಸಣ್ಣ ಕಾರಣಗಳಿಗೆ ಮನಸ್ತಾಪ ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts