More

    ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸಿ

    ಚಿತ್ರದುರ್ಗ: ರಾಷ್ಟ್ರದ ಕೆಲ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನಲಾದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ಸದಸ್ಯರು ಗುರುವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
    ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಘೋಷ ವಾಕ್ಯ ಪುನರುಚ್ಚರಿಸುವ ಪ್ರಧಾನಿ ನರೇಂದ್ರಮೋದಿ ಅವರು ಆರೋಪಿಯ ರಕ್ಷಣೆಗೆ ನಿಂತಿರುವುದು ಬೇಸರದ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯುತ್ತಿರುವುದು ರಾಷ್ಟಪತಿ ಅವರಿಗೆ ತಿಳಿದ ವಿಷಯವಾಗಿದೆ. ಆರೋಪಿ ವಿರುದ್ಧ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ನಂತರ ಎಫ್‌ಐಆರ್ ದಾಖಲಾಗಿದೆ. ಆದ್ದರಿಂದ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
    ಆರೋಪಿ ಬಂಧಿಸಲು ಕ್ರಮ ಕೈಗೊಳ್ಳಬೇಕಿದ್ದ ಕೇಂದ್ರ ಸರ್ಕಾರ ಪೊಲೀಸರ ಮೂಲಕ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ಧಮನಕಾರಿ ಧೋರಣೆ ಅನುಸರಿಸಿರುವುದು ಖಂಡನೀಯ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು. ವಿಚಾರಣಾ ಸಮಿತಿ ವರದಿ ಸಾರ್ವಜನಿಕರ ಗಮನಕ್ಕೆ ತರಬೇಕು. ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ, ರಾಷ್ಟ್ರಪತಿ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.
    ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ಮುಖಂಡರಾದ ಸುನಂದಾ, ಹಂಪಯ್ಯನಮಾಳಿಗೆ ಧನಂಜಯ, ಟಿ.ಶಫೀವುಲ್ಲಾ, ನುಲೇನೂರು ಶಂಕರಪ್ಪ, ಬಸ್ತಿಹಳ್ಳಿ ಸುರೇಶ್‌ಬಾಬು, ಸತ್ಯಪ್ಪ, ರವಿಕುಮಾರ್, ಮಲ್ಲಿಕಾರ್ಜನಪ್ಪ, ಕಾಂತರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ವೀರಣ್ಣ, ಓಂಕಾರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts