More

    ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ


    ಯಾದಗಿರಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ತಾಲೂಕಿನ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮುಂದಾಗುವಂತೆ ಸಂಬಂಸಿದ ಅಕಾರಿಗಳಿಗೆ ಜಿಲ್ಲಾಕಾರಿ ಸ್ನೇಹಲ್ ಆರ್., ಸೂಚನೆ ನೀಡಿದರು.

    ಶುಕ್ರವಾರ ಇಲ್ಲಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಾತ್ರೆಯ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜ.13ರಿಂದ 16ರ ವರೆಗೆ ಉತ್ಸವ ನಡೆಯಲಿದ್ದು, 14ರ ಮಕರ ಸಂಕ್ರಮಣ ದಿನ ಮಲ್ಲಯ್ಯನ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನೆರವೇರಲಿದೆ. ಜಾತ್ರೆಗೆ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

    ಸಾಂಪ್ರದಾುಕವಾಗಿ ನಡೆಸುವ ವಿವಿಧ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ನೆರವೇರಿಸಲು ಸಂಬಂಸಿದ ಪೂಜಾರಿಗಳಿಗೆ ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ವಹಿಸಬೇಕು. ದೇವಸ್ಥಾನಕ್ಕೆ ಬರುವ ಭಕ್ತರು ಗ್ರಾಮಕ್ಕೆ ಕೂಡುವ 6 ರಸ್ತೆಗಳಿದ್ದು, ಅವುಗಳಿಗೆ ಚೆಕ್ಪೋಸ್ಟ್ ತೆರೆದು ಕಾರ್ಯ ನಿರ್ವಹಿಸಿ, ಜಾತ್ರೆಯಲ್ಲಿ ಕುರಿಗಳನ್ನು ಹಾರಿಸುವುದನ್ನು ಸಂಪೂರ್ಣ ನಿಷೇಸಲಾಗಿದೆ. ಇದನ್ನು ನಿಯಂತ್ರಿಸಲು ಚೆಕ್ಪೋಸ್ಟ್ನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದರು.

    ಜಾತ್ರೆಗೆ ಮಹಾರಾಷ್ಟ್ರ ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಸೂಕ್ತ ಬಸ್ ಸಂಚಾರದ ವ್ಯವಸ್ಥೆ ( ರೂಟ್ ಮ್ಯಾಪ್) ಕಲ್ಪಿಸಬೇಕು. ಪೊಲೀಸ್ ಇಲಾಖೆುಂದ ಸೂಕ್ತ ಬಂದೋಬಸ್ತ್ ಒದಗಿಸಿ, ನಿರಂತರ ವಿದ್ಯುತ್ ಸರಬರಾಜಿಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಿ, ಅಗ್ನಿಶಾಮಕದಳದವರು ಸ್ಥಳದಲ್ಲೇ ಮೊಕ್ಕಾಂ ಹೂಡಬೇಕು ಎಂದು ಹೇಳಿದರು.

    ಜಾತ್ರೆ ನಡೆಯುವ ಸ್ಥಳ ಇಕ್ಕಟ್ಟಿನಿಂದ ಕೂಡಿದ್ದು, ಅಕ್ಕ-ಪಕ್ಕದ ಜಾಗದಲ್ಲಿ ಮಳಿಗೆಗಳನ್ನು ಹಾಕಲು ಅವಕಾಶ ನೀಡುತ್ತಿರುವುದು, ಜಾತ್ರೆಗೆ ಬರುವ ಭಕ್ತರು ನೂಕುನುಗ್ಗಲಿನಲ್ಲಿ ತೊಂದರೆ ಅನುಭವಿಸುವಂತಾಗಿದೆ. ದೇವಸ್ಥಾನ ಮುಖ್ಯದ್ವಾರದ ಸಮೀಪದಲ್ಲಿಯೇ ಮಳಿಗೆ ನಿಮರ್ಾಣದಿಂದ ತೀವ್ರ ಅಡೆ-ತಡೆಯಾಗುತ್ತಿರುವುದು ಭಕ್ತರಿಗೆ ಸಲೀಸಾಗಿ ದೇವಸ್ಥಾನಕ್ಕೆ ತೆರಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿ.ಬಿ.ವೇದಮೂರ್ತಿ, ಡಿವೈಎಸ್ಪಿ ಬಸವೇಶ್ವರ ಹೀರಾ, ತಹಸೀಲ್ದಾರ ಚನ್ನಮಲ್ಲಪ್ಪ ಘಂಟಿ, ಪಶುಪಾಲನೆ ಇಲಾಖೆ ಅಕಾರಿ ಡಾ.ರಾಜು ದೇಶಮುಖ್, ಪಂ.ನರಸಿಂಹಾಚಾರ್ ಪುರಾಣಿಕ, ಹಣಮಂತ ಸಿರಗೋಳ, ಮಲ್ಲು ಹಯ್ಯಳಕರ್, ಮೀನಾಕ್ಷಿ ಯರಗೋಳ, ದೇವಸ್ಥಾನದ ಅರ್ಚಕರಾದ ಬಸವರಾಜ್ ಪೂಜಾರಿ, ಬನ್ನಪ್ಪ ಶಿವಲಿಂಗ ಪೂಜಾರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts